ಈಜು ಬರದೆ ಮೋಜಿಗಳಿದು ಪ್ರಾಣ ಕಳೆದುಕೊಂಡ; ಹಬ್ಬಕ್ಕೆಂದು ಊರಿಗೆ ಬಂದಿದ್ದವನ ಸಾವು..

Gangadhar
Published on

ಕೋಲಾರ: ಹಬ್ಬಕ್ಕೆಂದು ಊರಿಗೆ ಬಂದಿದ್ದ ಯುವಕನೊಬ್ಬ ಈಜು ಬರದಿದ್ದರೂ ಮೋಜಿಗಿಳಿದು ಪ್ರಾಣ ಕಳೆದುಕೊಂಡಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಲ್ಲಗುಟ್ಟಲಹಳ್ಳಿಯಲ್ಲಿ ಈ ಅವಘಡ ಸಂಭವಿಸಿದೆ.

ಗಂಗಾಧರ್‌ ಎಂಬಾತ ಅನ್ಯಾಯವಾಗಿ ಪ್ರಾಣ ಕಳೆದುಕೊಂಡ ಯುವಕ. ಬೇರೆ ಊರಿನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈತ ದೀಪಾವಳಿ ಹಬ್ಬಕ್ಕೆಂದು ಊರಿಗೆ ಬಂದಿದ್ದ.

ಊರಿನಲ್ಲಿ ಗೆಳೆಯರೊಂದಿಗೆ ಮೋಜಿಗೆ ತೆರಳಿದ್ದ ಗಂಗಾಧರ್‌, ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದಾನೆ. ಆದರೆ ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಇಲ್ಲಿನ ಕಾಮಸಮುದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net