ಯುವಕರು ದುಶ್ಚಟಕ್ಕೆ ಬಲಿಯಾಗುವುದನ್ನು ತಪ್ಪಿಸಬೇಕಿದೆ

09-GPT-2
Published on

ಗುಂಡ್ಲುಪೇಟೆ: ಯುವಕರು ದುಶ್ಚಟಗಳಿಗೆ ಬಲಿಯಾಗಿ ದಾರಿ ತಪ್ಪುತ್ತಿದ್ದು, ಅದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಹೇಳಿದರು.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸಂಸ್ಥೆಯ ವತಿಯಿಂದ ತಾಲೂಕಿನ ಬೇಗೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಕ್ಕಳನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುವ ಮೂಲಕ ಉತ್ತಮ ಜನಾಂಗದ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಉತ್ತಮ ಪರಿಸರದಿಂದ ಉತ್ತಮ ಸಮಾಜ ನಿರ್ಮಾಣ ಮಾಡುವ ಸಲುವಾಗಿ ಎಲ್ಲರೂ ಪರಿಸರದ ಉಳಿವಿಗೆ ಶ್ರಮಿಸಬೇಕು. ಶಾಲಾ- ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದರೂ ಕುಡಿತ, ಅಮಲು ಪದಾರ್ಥ ಸೇವನೆ ಮುಂತಾದ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಸಮಾಜದಲ್ಲಿ ಅತ್ಯಂತ ಜವಾಬ್ದಾರಿ ಹೊಣೆ ಹೊತ್ತಿರುವ ಶಿಕ್ಷಕರು ಶಿಕ್ಷಣ ನೀಡುವ ಜತೆಗೆ ನೈತಿಕ ಪಾಠಗಳನ್ನು ಕಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ತಿಳಿಸಿದರು.


ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಎನ್.ಆರ್.ಪುರದ ಶ್ರೀ ಬಸವಯೋಗಿ ಪ್ರಭು ಸ್ವಾಮೀಜಿ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಎಪಿಎಂಸಿ ನಿರ್ದೇಶಕ ಆರ್.ಎಸ್.ನಾಗರಾಜು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಮಚಂದ್ರ, ಅನ್ನಪೂರ್ಣಮ್ಮ, ಪ್ರಾಂಶುಪಾಲ ಚಂದ್ರಶೇಖರ್, ಉಪನ್ಯಾಸಕ ಷಡಕ್ಷರಸ್ವಾಮಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net