

ವಿಜಯವಾಣಿ ಸುದ್ದಿಜಾಲ ಹಾಲಾಡಿ
ಯುವಕರು ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಹೇಳಿದರು.
ಹಾಲಾಡಿ ಗ್ರಾಮದ ಮುದೂರಿ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಸಹಸ್ರ ದೀಪೋತ್ಸವ ಹಾಗೂ ಮುದೂರಿ ಮೈತ್ರಿ ಯುವಕ ಮಂಡಲ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೈತ್ರಿ ಯುವಕ ಮಂಡಲ ಅಧ್ಯಕ್ಷ ಸುರೇಂದ್ರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಮುದೂರಿ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನ ಮೊಕ್ತೇಸರ ಶಿವರಾಮ ಅಡಿಗ, ಹಾಲಾಡಿ ಗ್ರಾಪಂ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ, ದಾನಿ ಭವಾನಿ ಶೆಟ್ಟಿ, ಹಾಲಾಡಿ ವಲಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಅನೂಪ್‌ಕುಮಾರ್ ಶೆಟ್ಟಿ, ಮೂದೂರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಎಂ.ಮುದೂರಿ, ಪ್ರಭಾರ ಮುಖ್ಯ ಶಿಕ್ಷಕ ಪ್ರವೀಣ್ ಶೆಟ್ಟಿ, ಯುವಕ ಮಂಡಲ ಗೌರವಾಧ್ಯಕ್ಷ ಶಶಿಧರ ಶೆಟ್ಟಿ ಚೇರ್ಕಿ ಉಪಸ್ಥಿತರಿದ್ದರು. ಸುಧೀರ್‌ರಾಜ್ ಕಟ್ಟಿನಗುಂಡಿ ಸ್ವಾಗತಿಸಿದರು. ಶಶಿಧರ ಶೆಟ್ಟಿ ಚೇರ್ಕಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ವೈಶಾಲಿ ಹೆಬ್ಬಾರ್ ಸನ್ಮಾನ ಪತ್ರ ವಾಚಿಸಿದರು. ಗಣೇಶ ಅರಸಮ್ಮಕಾನು ಕಾರ್ಯಕ್ರಮ ನಿರೂಪಿಸಿದರು. ಹರ್ಷರಾಜ್ ಮುದೂರಿ ವಂದಿಸಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಅಧ್ಯಕ್ಷ ಹಾಗೂ ಡಾಕ್ಟರ್ ಆಫ್ ಸೈನ್ಸ್ ಪ್ರಶಸ್ತಿ ಪುರಸ್ಕೃತ ಡಾ.ಹಾಲಾಡಿ ಶ್ರೀನಿವಾಸ ಶೆಟ್ಟಿ ಕುದ್ರುಮನೆ ಅವರನ್ನು ಸನ್ಮಾನಿಸಲಾಯಿತು.