ಯುವಜನರು ಸರ್ಕಾರಿ ಯೋಜನೆ ಬಳಸಿಕೊಳ್ಳಬೇಕು

ckm trrr
ಚಿಕ್ಕಮಗಳೂರು ಭಾರತ್ ಸೇವಾದಳ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಭಾರತ ಸೇವಾದಳದ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವನ್ನು ಸಾಹಿತಿ ಬಿ.ತಿಪ್ಪೇರುದ್ರಪ್ಪ ಉದ್ಘಾಟಿಸಿದರು. ಅಭಿಷೇಕ್ ಚವಾರೆ, ಚಂದ್ರಕಾಂತ್, ಇಮ್ರಾನ್ ಅಹಮದ್ ಬೇಗ್, ಎನ್.ರಾಮಪ್ಪ, ಕುಮಾರಸ್ವಾಮಿ ಇತರರಿದ್ದರು.
Published on

ಚಿಕ್ಕಮಗಳೂರು: ಭಾರತ ಧಾರ್ಮಿಕವಾಗಿ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಜಗತ್ತಿನಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯಬೇಕು ಎಂಬುದು ಸ್ವಾಮಿ ವಿವೇಕಾನಂದ ಅವರ ಕನಸಾಗಿತ್ತು ಎಂದು ಸಾಹಿತಿ ಬಿ.ತಿಪ್ಪೇರುದ್ರಪ್ಪ ತಿಳಿಸಿದರು.

ನಗರದ ಭಾರತ್ ಸೇವಾದಳ ಕಚೇರಿಯಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಭಾರತ ಸೇವಾದಳದ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.ವಿವೇಕಾನಂದರ ಅಭಿಲಾಷೆಗಳಿಗೆ ಪೂರಕವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯುವಜನತೆಗಾಗಿಯೇ ಹಲವು ಕಾರ್ಯಕ್ರಮ ಹಮ್ಮಿಕೊಂಡಿವೆ. ಜ.12ರಂದು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಇಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ದೇಶಕಟ್ಟುವ ಕೆಲಸವನ್ನು ಯುವನಜತೆ ಮಾಡಬೇಕಿದೆ ಎಂದು ಹೇಳಿದರು.ನೆಹರು ಯುವ ಕೇಂದ್ರದ ಅಧಿಕಾರಿ ಅಭಿಷೇಕ್ ಚವಾರೆ ಮಾತನಾಡಿ, ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಮೊದಲನೇ ಬಹುಮಾನ 1 ಲಕ್ಷ ರೂ., ದ್ವಿತೀಯ ಬಹುಮಾನ 50 ಸಾವಿರ ರೂ., ತೃತೀಯ ಬಹುಮಾನ 25 ಸಾವಿರ ರೂ. ನೀಡಲಾಗುವುದು ಎಂದರು.ಸೇವಾದಳ ಸಂಘಟನಾ ಅಧಿಕಾರಿ ಚಂದ್ರಕಾಂತ್, ರಾಜ್ಯ ಯುವ ಸಂಘಗಳ ಒಕ್ಕೂಟದ ಚಿಕ್ಕಮಗಳೂರು ಘಟಕದ ಅಧ್ಯಕ್ಷ ಇಮ್ರಾನ್ ಅಹಮದ್ ಬೇಗ್, ಎನ್.ರಾಮಪ್ಪ, ಕುಮಾರಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net