

ಪಡುಬಿದ್ರಿ: ಭಾರತೀಯ ಜನತಾ ಪಕ್ಷ ಕಾಪು ಮಂಡಲ ಯುವ ಮೋರ್ಚಾ ವತಿಯಿಂದ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಾಪುವಿನಲ್ಲಿ ಶುಕ್ರವಾರ ಯುವ ತಿರಂಗಾ ಯಾತ್ರೆ ನಡೆಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುವಾರ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ವಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಉಪಾಧ್ಯಕ್ಷ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸೋನು ಪಾಂಗಾಳ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸಂತೋಷ ಮೂಡುಬೆಳ್ಳೆ ಮತ್ತಿತರರು ಪಾಲ್ಗೊಂಡಿದ್ದರು.