ತತ್ವಗಳು ಜೀವನಕ್ಕೆ ಬೆಳಕು : ಕಿಶೋರ್ ಕುಮಾರ್ ಬೊಟ್ಯಾಡಿ ಅಭಿಮತ

New Project (21)
Published on

ಕಡಬ: ಸ್ವಾಮಿ ವಿವೇಕಾನಂದರು ಜೀವಿಸಿದ ಅವಧಿ ಬಹಳ ಕಡಿಮೆಯಾದರೂ ಅವರ ತತ್ವಗಳು ಈ ಭೂಮಂಡಲ ಇರುವವರೆಗೂ ಶಾಶ್ವತ. ವಿವೇಕಾನಂದರ ತತ್ವಗಳು ಯುವಜನತೆಯ ಜೀವನವನ್ನು ಬೆಳಗಿಸಲಿವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದರು.

ಸವಣೂರು ಸ.ಪ.ಪೂ. ಕಾಲೇಜಿನಲ್ಲಿ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಕಡಬ ತಾಲೂಕು ಪಂಚಾಯಿತಿ, ಸವಣೂರು ಗ್ರಾಮ ಪಂಚಾಯಿತಿ, ಸವಣೂರು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ, ಸವಣೂರು ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ವಿವೇಕಾನಂದರ ತತ್ವ ಆದರ್ಶಗಳ ಕುರಿತು ಉಪನ್ಯಾಸ ನೀಡಿದರು. ಸವಣೂರು ಪ.ಪೂ.ಕಾಲೇಜಿನ ಪ್ರಾಚಾರ್ಯೆ ಪದ್ಮಾವತಿ ಎನ್.ಪಿ.ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ವಾಜಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಯುವಜನ ಒಕ್ಕೂಟದ ಸುರೇಶ್ ರೈ ಸೂಡಿಮುಳ್ಳು, ಸವಣೂರು ಪಿ.ಯು. ಕಾಲೇಜಿನ ಕಾರ್ಯಾಧ್ಯಕ್ಷ ಗಿರಿಶಂಕರ ಸುಲಾಯ, ಪ್ರೌಢಶಾಲಾ ಮುಖ್ಯಗುರು ರು ಬಿ.ಆರ್., ಉಪನ್ಯಾಸಕರಾದ ಹರಿಶಂಕರ್ ಕೆ.ಎಂ., ರೀನಾ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ಸಚಿನ್ ಭಂಡಾರಿ ಮೊದಲಾದವರಿದ್ದರು.

ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.ಸ್ವಾಗತಿಸಿದರು. ಕಾರ್ಯದರ್ಶಿ ಕೀರ್ತನ್ ಕೋಡಿಬೈಲು ವಂದಿಸಿದರು. ಸವಣೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಾಮಚ್ಚನ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net