

ದಾವಣಗೆರೆ: ಸಾವು ಎಲ್ಲಿ ಹೇಗೆ ಬಂದೀತು ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಎಂದರೂ ತಪ್ಪಾಗಲಾರದು. ಮೂತ್ರ ವಿಸರ್ಜನೆಗೆ ಎಂದು ಹೋಗಿದ್ದ ಯುವಕನೊಬ್ಬ ಪ್ರಾಣ ಕಳೆದುಕೊಂಡ ಶಾಕಿಂಗ್ ನ್ಯೂಸ್ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ದಾವಣಗೆರೆ ಜಿಲ್ಲೆಯ ಯಲ್ಲಮ್ಮ ನಗರದ ಕುಂದುವಾಡ ರಸ್ತೆಯ ಬಳಿ ಈ ದುರಂತ ಘಟನೆ ಸಂಭವಿಸಿದೆ. ಭರತ್ ಕಾಲನಿ ನಿವಾಸಿ ಮನೋಜ್ ಮಜ್ಜಿಗೆ (23) ಎಂಬ ಯುವಕ ಸಾವಿಗೀಡಾಗಿದ್ದಾನೆ. ದಾವಣಗೆರೆಯಲ್ಲಿ ಸುರಿಯುತ್ತಿದ್ದ ತುಂತುರು ಮಳೆಯಲ್ಲಿ ಇಂಥದ್ದೊಂದು ದುರ್ಘಟನೆ ಸಂಭವಿಸಿದೆ.
ಮನೋಜ್ ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆಗೆ ಎಂದು ಹೋಗಿದ್ದಾನೆ. ಆಗ ತುಂತುರು ಮಳೆ ಸುರಿಯುತ್ತಿದ್ದುದರಿಂದ ವಿದ್ಯುತ್ ಕಂಬ ಗ್ರೌಂಡ್ ಆಗಿ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಬಳಿಕ ಶವವವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.