

ಬೆಳಗಾವಿ: ಪಟ್ಟಣದ ಹೊರವಲಯದಲ್ಲಿ ಭಾನುವಾರ ತಡರಾತ್ರಿ ಯುವಕೊಬ್ಬನನ್ನು ಬರ್ಬರ ಹತ್ಯೆ ಪ್ರಕರಣ ಮುರಗೋಡ ಪೊಲೀಸ್ ಠಾಣೆಯಲ್ಲಿ ಸೋಮವಾರ ದಾಖಲಾಗಿದೆ.
ಪಟ್ಟಣದ ವಿನೋದ.ಎಂ (28) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಮದುವೆ ಪಾರ್ಟಿ ವೇಳೆ ಇಬ್ಬರ ನಡುವೆ ಮದ್ಯಕ್ಕಾಗಿ ಗಲಾಟೆ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿ ಇನ್ನೋರ್ವ ಮಾರಾಕಸ್ತ್ರದಿಂದ ಹಿರಿದು ಹತ್ಯೆ ಮಾಡಿದ್ದಾರೆ. ಈಗಾಗಲೆ ಹತ್ತು ಜನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತನಿಖೆಯ ಬಳಿಕವೇ ಸತ್ಯಾಂಶ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.