ಕೆ.ಆರ್.ಸಾಗರ: ವಿಶ್ವ ವಿಖ್ಯಾತ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗಿರುವ ಹಿನ್ನ್ನೆಲೆಯಲ್ಲಿ ಮೈಸೂರು ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಯದುವಿರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆ.15 ರಂದು ಬೆಳಗ್ಗೆ 12.30 ಕ್ಕೆ ವೇದಬೃಹ್ಮ ಡಾ.ಭಾನುಪ್ರಕಾಶ್ ಶರ್ಮ ಮಾರ್ಗದರ್ಶನದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಲಿದ್ದಾರೆ.
ಅಣೆಕಟ್ಟೆ ಭರಿದಾದಾಗ ಹಾಗೂ ಅಣೆಕಟ್ಟೆ ಭರ್ತಿಯಾದ ಯುದುವೀರ್ ತಮ್ಮ ತಾಯಿ ಪ್ರಮೋದಾ ದೇವಿ ಒಡೆಯರ್ ಹಾಗೂ ಪತ್ನಿ ತ್ರಿಷಿಕಾಕುಮಾರಿ ಅವರ ಜತೆ ಕೆ.ಆರ್.ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ವೀಕ್ಷಣೆ ಮಾಡುತ್ತಿದ್ದರು. ಇದೀಗ ಸಂಸದರಾದ ನಂತರ ಪ್ರಥಮ ಬಾರಿಗೆ ಬಾಗಿನ ಅರ್ಪಿಸುತ್ತಿರುವುದು ವಿಶೇಷವಾಗಿದೆ. ಸಂಸತ್ ಅಧಿವೇಶನ ಇದ್ದ ಹಿನ್ನೆಲೆಯಲ್ಲಿ ಜು.29 ರಂದು ನಡೆದ ಮುಖ್ಯಮಂತ್ರಿಗಳ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಕಳೆದ ಜುಲೈ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ನಂತರ ಜಿಲ್ಲಾ ಉಸ್ತುವಾರಿ ಸಚಿವರ ಚಲುವಾಯಸ್ವಾಮಿ ಹಾಗೂ ಶಾಸಕ ರಮೇಶ ಬಂಡಿಸಿದ್ದೇಗೌಡ ದಂಪತಿ ಸಮೇತವಾಗಿ ಬಾಗಿನ ಅರ್ಪಿಸಿದ್ದರು.