ಯುಕ್ತಾಶ್ರೀ ರೊದ್ದಂ ರಾಷ್ಟ್ರಮಟ್ಟಕ್ಕೆ ಆಯ್ಕೆ

h13-yuktasri roddam
Published on

ಹುಬ್ಬಳ್ಳಿ: ಅಖಿಲಾ ಕರ್ನಾಟಕ ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸೌಥ್ ಇಂಡಿಯಾ ಕರಾಟೆ ಚಾಂಪಿಯಶಿಪ್-2025ರಲ್ಲಿ ನಗರದ ಜೆ.ಜಿ. ಕಾಮರ್ಸ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತಾಶ್ರೀ ರೊದ್ದಂ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂಬರುವ ಅಕ್ಟೋಬರ್‌ನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವರು. ವಿದ್ಯಾರ್ಥಿನಿಯ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net