ಯುವ ಚೇತನ ಕಾರ್ಯಾಗಾರ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಓದುತ್ತಿರುವ ಪದವಿ ವಿದ್ಯಾರ್ಥಿಗಳಿಗೆ ಆಸಕ್ತಿಗೆ ಅನುಗುಣವಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲು ಯುವ ಚೇತನ ಎಂಬ ವಿಶೇಷ ಕಾರ್ಯಕ್ರಮವನ್ನು ಮಾ. 4ರಿಂದ ಆರಂಭಿಸಲಾಗುತ್ತಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಇಲ್ಲಿನ ಸೃಜನಾ ರಂಗ ಮಂದಿರದಲ್ಲಿ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ಮಾ. 4ರಂದು ಬೆಳಗ್ಗೆ 10 ಗಂಟೆಗೆ ಜಿಪಂ ಸಿಇಒ ಭುವನೇಶ ಪಾಟೀಲ ಚಾಲನೆ ನೀಡುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು. ಪ್ರದಿಪ ಆಚಾರ್ಯ ಹಾಗೂ ಗುರುರಾಜ ಬುಲಬುಲೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.

ಯುವ ಚೇತನ ಕಾರ್ಯಕ್ರಮದಲ್ಲಿ ಪ್ರತಿ ತಿಂಗಳು ತಜ್ಞರಿಂದ ವಿಶೇಷ ಉಪನ್ಯಾಸಗಳನ್ನು ಸಂಘಟಿಸಲಾಗುತ್ತದೆ. ವಸತಿ ನಿಲಯಗಳಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ವಿವಿಧ ಪರೀಕ್ಷೆಗಳ ಸಿದ್ಧತೆ ಕಲಿಸುವುದು ಮತ್ತು ಪರೀಕ್ಷೆಗಳಿಗೆ ಪೂರಕ ವಿಷಯಗಳನ್ನು ಮನನ ಮಾಡುವುದು ಹಾಗೂ ಜಿಲ್ಲೆಯಲ್ಲಿರುವ ಐಎಎಸ್​, ಐಪಿಎಸ್​ ಮತ್ತು ಕೆಎಎಸ್​ ಸೇರಿ ವಿವಿಧ ಕೇಡರ್​ಗಳ ಅಧಿಕಾರಿಗಳಿಂದ ಉಪನ್ಯಾಸ ನೀಡುವ ಗುರಿ ಹೊಂದಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net