

ಕೊಳ್ಳೇಗಾಲ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಚ್.ಎಸ್.ಮಂಜುನಾಥ್ ಅವರು ಬುಧವಾರ ಪಟ್ಟಣಕ್ಕೆ ಭೇಟಿ ನೀಡಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಮಂಜುನಾಥ್ ಮಾತನಾಡಿ, ಸಾಮಾನ್ಯ ಜನರು ನಾಯಕರಾಗಬೇಕೆಂಬುದು ವರಿಷ್ಠರಾದ ರಾಹುಲ್ ಗಾಂಧಿ ಅವರ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಚುನಾವಣೆ ಎಂಬ ಆಂತರಿಕ ಚುನಾವಣೆ ನಡೆಯುತ್ತಿದೆ. ನಾನು ಸಹ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ಹಿಂದೆ ಎನ್.ಎಸ್.ಯು.ಐ ಕೆಲಸ ಮಾಡಿದ ಅನುಭವವಿದೆ. ರಾಜ್ಯಾದ್ಯಂತ ಯುವ ಸಮುದಾಯ ನನಗೆ ಬೆಂಬಲ ನೀಡುತ್ತಿದ್ದಾರೆ. ಈ ಚುನಾವಣೆಯಲ್ಲಿ ನನಗೆ ಗೆಲ್ಲುವ ವಿಶ್ವಾಸವಿದೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ದಿಸಲು ನನಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಿದೆ ಎಂದು ಹೇಳಿದರು.
ವಿದೇಶದಲ್ಲಿ ರಾಹುಲ್ ಗಾಂಧಿ ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿದ್ದಾರೆ. ಮುಂದೆ ಅವರೇ ನಮ್ಮ ದೇಶವನ್ನು ನಡೆಸುತ್ತಾರೆ ಎಂದರು.
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೈರಾಜ್, ಮುಖಂಡ ಲೋಕೇಶ್, ನಂಜುಂಡಸ್ವಾಮಿ, ಸರಗೂರು ಶಿವು, ಯೋಗೇಂದ್ರ, ನಂಜುಂಡಶೆಟ್ಟಿ, ದರ್ಶನ್, ಮಾದೇಶ್ ಮತ್ತಿತರರಿದ್ದರು.