ಯುವನಿಧಿ ಕಾರ್ಯಕ್ರಮದ ನೊಂದಣಿ ಪ್ರಕ್ರಿಯೆಗೆ ಚಾಲನೆ

44444444444444
Published on

ಗದಗ:  ಗದಗ ಜಿಲ್ಲೆಯಲ್ಲಿ ಯುವನಿಧಿ ಕಾರ್ಯಕ್ರಮದ ನೋಂದಣಿ ಪ್ರಕ್ರಿಯೆಯನ್ನು ಮಂಗಳವಾರದಂದು ಆರಂಭಗೊಳಿಸಲಾಯಿತು. ರಾಜ್ಯ ಸರ್ಕಾರದ ಯೋಜನೆಯಾದ ಯುವ ನಿಧಿ ಯೋಜನೆಯನ್ನು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧ ಬ್ಯಾಕ್ವೆಟ್ ಹಾಲ್‍ದಲ್ಲಿ ಮಂಗಳವಾರದಂದು ವಿದ್ಯುಕ್ತವಾಗಿ ಚಾಲನೆ ನೀಡಿದ್ದು ಅದರ ಪ್ರಯುಕ್ತ ಗದಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಯೋಜನೆಯ ಕುರಿತು ಬಿತ್ತಿಪತ್ರಗಳನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ  ಉದ್ಯೋಗಾಧಿಕಾರಿ ಬಸವಂತ ಪಿ.ಎನ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ, ಸಹಾಯಕ ನಿರ್ದೇಶಕರಾದ ಶ್ರೀಮತಿ ಉಮಾ ಪಾಳೇಗಾರ, ಜಿಮ್ಸ್  ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಿವಪ್ರಕಾಶ ನೀಲಗುಂದ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net