

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ
ಕಾಂಗ್ರೆಸ್ ಜನಸಾಮಾನ್ಯರ, ಬಡವರ ಪರವಾದ ಪಕ್ಷವಾಗಿದ್ದು, ಸರ್ಕಾರದ ಗ್ಯಾರಂಟಿಯಂತಹ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದರೊಂದಿಗೆ ಯುವ ಕಾಂಗ್ರೆಸಿಗೆ ಶಕ್ತಿ ತುಂಬುವ ಕಾರ್ಯ ಯುವಕರಿಂದ ಆಗಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ ಹೇಳಿದರು.
ಈಶ್ವರಮಂಗಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಹಾಗೂ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಯುವಕ್ರಾಂತಿ ಬೂತ್ ಶಕ್ತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ದ.ಕ. ಜಿಲ್ಲಾ ಯುವಕ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ಅಧ್ಯಕ್ಷತೆ ವಹಿಸಿದ್ದರು. ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಿರ್ದೇಶಕ ಅಬ್ದುಲ್ ರಹಿಮಾನ್ ಮಿನಿ, ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ, ನಗರಸಭೆ ಸದಸ್ಯ ಬಶೀರ್ ಪರ್ಲಡ್ಕ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಉಸ್ತುವಾರಿ ಇಂತಿಯಾಜ್ ಕಲ್ಲಡ್ಕ, ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕಾರ್ಯದರ್ಶಿ ಶಮೀಮ್ ಗಾಳಿಮುಖ ಮತ್ತಿತರರಿದ್ದರು.
ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಲಯ ಅಧ್ಯಕ್ಷರಾಗಿ ಸವಾದ್ ಮೆನಾಲ, ಉಪಾಧ್ಯಕ್ಷರಾಗಿ ಪ್ರದೀಪ್, ಕಾರ್ಯದರ್ಶಿಯಾಗಿ ಸಿಯಾಬ್, ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿ ಪವಾಜ್ ಮೆನಾಲ ಅವರನ್ನು ಆಯ್ಕೆ ಮಾಡಲಾಯಿತು.
ಯುವ ಕಾಂಗ್ರೆಸ್ ಸದಸ್ಯತ್ವ ನೋಂದಣಿಯಲ್ಲಿ ಜಿಲ್ಲೆಯಲ್ಲೇ ಅತೀ ಹೆಚ್ಚು ಸದಸ್ಯತ್ವ ನೋಂದಣಿಗೊಂಡಿರುವುದು ಪುತ್ತೂರು ಕ್ಷೇತ್ರದಲ್ಲಿ ಎಂಬುವುದು ಹೆಮ್ಮೆಯ ವಿಚಾರ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಪ್ರವೃತ್ತರಾಗಬೇಕು. ಇಬ್ರಾಹಿಂ ನವಾಜ್, ಅಧ್ಯಕ್ಷರು, ದ.ಕ. ಜಿಲ್ಲಾ ಯುವ ಕಾಂಗ್ರೆಸ್ https://www.vijayavani.net/scholarship-distribution-at-guru-math https://www.vijayavani.net/mosaru-kudike