

ಮಡಿಕೇರಿ:
ಮಡಿಕೇರಿ ತಾಲೂಕು ಪಂಚಾಯತಿಯಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊAಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅನಾವರಣ ಮಾಡಲಾಯಿತು. ಈ ವೇಳೆ ಮಾತನಾಡಿದ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ್, 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟನಲ್ಲಿ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳು ಈ ಯೋಜನೆಯಡಿ ಭತ್ಯೆ ಪಡೆಯಲು ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ ತ್ರೈಮಾಸಿಕದಂತೆ ತಾನು ಸಾರ್ವಜನಿಕ ಅಥವಾ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮಾಡುತ್ತಿಲ್ಲವೆಂದು ಮತ್ತು ಸ್ವಯಂ ಉದ್ಯೋಗ ಮಾಡುತ್ತಿಲ್ಲವೆಂದು, ಉನ್ನತ ವ್ಯಾಸಂಗವನ್ನು ಮುಂದುವರಿಸುತ್ತಿಲ್ಲವೆAದು ಸ್ವಯಂ ಘೋಷಣೆಯನ್ನು ನೀಡಬೇಕಿದೆ. ಯುವನಿಧಿ ಫಲಾನುಭವಿಗಳು ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಬಹುದಾಗಿದ್ದು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್‌ದಾಸ್, ತಾಲೂಕು ಪಂಚಾಯಿತಿ ಇಒ ಶೇಖರ್ ಮತ್ತಿತರರು ಇದ್ದರು.