ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯೂ ಅವಶ್ಯಕ : ಪ್ರೊ. ಕೆ.ಎಂ. ಮಹದೇವನ್

yuvaraja college
Published on

ಮೈಸೂರು: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನವಾದ ಅವಕಾಶ ನೀಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಎಂ. ಮಹದೇವನ್ ಅಭಿಪ್ರಾಯಪಟ್ಟರು.

ಯುವರಾಜ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ‘ಜ್ಞಾನ ವಾಹಿನಿ’ಯ ಸಾಂಸ್ಕೃತಿಕ, ಶೈಕ್ಷಣಿಕ, ಕ್ರೀಡೆ, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನೆ ಹಾಗೂ ಕನ್ನಡ ನುಡಿಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಲವೊಮ್ಮೆ ಪಠ್ಯೇತರ ಚಟುವಟಿಕೆಗಳು ನಮ್ಮ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳು ತರಬಲ್ಲದು. ಹಾಗಾಗಿ ಪಠ್ಯೇತರ ಚಟುವಟಿಕೆ ಗಳನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು.

ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಸಹಾಯಕ ಪ್ರಾಧ್ಯಾಪಕ ಡಾ. ಭೀಮರಾಜು ಈರೇಗೌಡ ಮಾತನಾಡಿ, ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳ ಮೂಲಕವೂ ಉತ್ತಮ ಜೀವನ ರೂಪಿಸಿಕೊಳ್ಳಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net