ಯುವವಾಹಿನಿ ಸಾಹಿತ್ಯ ಸ್ಪರ್ಧೆ ಬಹುಮಾನ ವಿತರಣೆ

New Project
Published on

ಬಂಟ್ವಾಳ: ಯುವವಾಹಿನಿಯ ಸಲಹೆಗಾರ ಬಿ.ತಮ್ಮಯ ನೆನಪಿನ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯ ವಿಜೇತರಿಗೆ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಅತೀ ಸಣ್ಣ ಕಥೆ ವಿಭಾಗದಲ್ಲಿ ಸುಲ್ತಾನ್ ಮನ್ಸೂರು ಕುಕ್ಕಾಜೆ - ಪ್ರಥಮ, ಸ್ಮಿತಾ ಅಮೃತರಾಜ್ ಸಂಪಾಜೆ - ದ್ವಿತೀಯ ಸ್ಥಾನ ಪಡೆದರು. ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ರೂಪಕಲಾ ಆಳ್ವ ಪ್ರಥಮ, ನಳಿನಿ ಭೀಮಪ್ಪ ಧಾರವಾಡ ದ್ವಿತೀಯ ಸ್ಥಾನ ಪಡೆದರು.

ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನರಿಕೊಂಬು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ನೇಮ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಉಮೇಶ್ ಬಾಯಾರು, ಯುವವಾಹಿನಿ ಬಂಟ್ವಾಳ ಘಟಕದ ಕಾರ್ಯದರ್ಶಿ ಚೇತನ್ ಮುಂಡಾಜೆ, ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ನೂತನ ಕಾರ್ಯದರ್ಶಿ ಮಧುಸೂದನ್ ಮದ್ವ ಉಪಸ್ಥಿತರಿದ್ದರು.

ನೂರಕ್ಕೂ ಹೆಚ್ಚು ಮಂದಿ ಭಾಗಿ

ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಹೊಸಪೇಟೆ, ವಿಜಯನಗರ, ಬೆಂಗಳೂರು, ಚಿತ್ರದುರ್ಗ, ಶಿರಸಿ, ಮೈಸೂರು, ದಾವಣಗೆರೆ, ಶಿವಮೊಗ್ಗ, ತೀರ್ಥಹಳ್ಳಿ, ಬೆಳಗಾವಿ, ಧಾರವಾಡ, ಮಡಿಕೇರಿ, ಉತ್ತರ ಕನ್ನಡ, ಹಾಸನ, ಜಿಲ್ಲೆಗಳಿಂದ ಹಾಗೂ ಮುಂಬೈಯಿಂದ ನೂರಕ್ಕೂ ಹೆಚ್ಚು ಸಾಹಿತಿಗಳು, ಬರಹಗಾರರು ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net