ನಾರಾಯಣ ಗುರು ಜಯಂತಿ ಸಾರ್ವತ್ರಿಕ ಆಚರಣೆ: ಡಾ. ರಾಜಾರಾಮ್ ಉಪ್ಪಿನಂಗಡಿ

vuvahvahini new
Published on

ಪಡುಬಿದ್ರಿ: ಹಿಂದುಳಿದ ವರ್ಗಗಳ ಸಮುದಾಯದ ಪ್ರಗತಿಗಾಗಿ ಜೀವನವನ್ನು ಮುಡಿಪಾಗಿಟ್ಟ ನಾರಾಯಣ ಗುರುಗಳ ಜಯಂತಿ ಕೇವಲ ಬಿಲ್ಲವ ಸಮಾಜಕ್ಕೆ ಸೀಮಿತವಾಗಿರದೆ, ಸಾರ್ವತ್ರಿಕವಾಗಿ ಆಚರಿಸುವಂತಾಗಬೇಕಿದೆ. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಯುವವಾಹಿನಿ ಮುಂದಿನ ದಿನಗಳಲ್ಲಿ ನಡೆಸಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಡಾ. ರಾಜಾರಾಮ್ ಉಪ್ಪಿನಂಗಡಿ ಹೇಳಿದರು.

ಕಾಪು ಬಿಲ್ಲವರ ಸಹಾಯಕ ಸಂಘದ ಸಭಾಭನದಲ್ಲಿ ಭಾನುವಾರ ಆಯೋಜಿಸಿದ ಯುವವಾಹಿನಿ ಕಾಪು ಘಟಕದ 2020-21ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಯುವವಾಹಿನಿ ಕಾಪು ಘಟಕದ 2020-21ನೇ ಸಾಲಿನ ಅಧ್ಯಕ್ಷೆಯಾಗಿ ನಿಯೋಜನೆಗೊಂಡ ಸೌಮ್ಯಾ ರಾಕೇಶ್ ಅವರಿಗೆ ನಿರ್ಗಮನ ಅಧ್ಯಕ್ಷ ನಾಗೇಶ್ ಸುವರ್ಣ ಅಧಿಕಾರ ಹಸ್ತಾಂತರಿಸಿದರು. ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ್ ಪೂಜಾರಿ ಕಾಪು ಕಾರ್ಯಕ್ರಮ ಉದ್ಘಾಟಿಸಿದರು. ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಉಪಾಧ್ಯಕ್ಷ ಉದಯ ಅಮೀನ್ ಮೂಲ್ಕಿ, ಸಂಘಟನಾ ಕಾರ್ಯದರ್ಶಿ ರಮೇಶ್ ಕೋಟ್ಯಾನ್, ಯುವವಾಹಿನಿ ಕಾಪು ಘಟಕದ ಮಾಜಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಉಪಸ್ಥಿತರಿದ್ದರು.

ಕಾಪು ಪುರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅನಿಲ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಡಾ. ರಾಜಾರಾಮ್, ಯುವವಾಹಿನಿ ಕಾಪು ಘಟಕದ ನಿರ್ಗಮನ ಅಧ್ಯಕ್ಷ ನಾಗೇಶ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಯುವವಾಹಿನಿ ಕಾರ್ಯದರ್ಶಿ ಸುಧಾಕರ್ ಸಾಲ್ಯಾನ್ ವರದಿ ವಾಚಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net