ಜಿ.ಪಂ. ತ್ರೈಮಾಸಿಕ ಕೆಡಿಪಿ ಸಭೆ

Santosh S. Lad
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ 4ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆಯಲ್ಲಿ ಏ. 22ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net