ಜಮೀರ್ ಅಹ್ಮದ್ ಕಿತ್ತೊಗೆಯಿರಿ

3New Joshi New 333
Published on

ಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ಮೊದಲು ಜಮೀರ್ ಅಹ್ಮದ್ ಅವರನ್ನು ಕಿತ್ತೊಗೆಯಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಕ್ಪ್ ಭೂ ಕಬಳಿಕೆಯಲ್ಲಿ ಜಮೀರ್ ಅಹ್ಮದ್ ಸಂಚಿದೆ. ಕಾಂಗ್ರೆಸ್ ಪಾರ್ಟಿಗೆ ಮಾನ, ಮರ್ಯುದೆ ಇದ್ದರೆ ತಕ್ಷಣ ಅವರನ್ನು ಪಕ್ಷದಿಂದಲೇ ಕಿತ್ತೊಗೆಯಲಿ ಎಂದು ಒತ್ತಾಯಿಸಿದರು.

ಸಚಿವ ಜಮೀರ್ ಅಹ್ಮದ್ ಈ ರಾಜ್ಯ ಮತ್ತು ದೇಶವನ್ನು ಇಸ್ಲಾಂಮೀಕರಣ ಮಾಡಲು ನಿಂತಿದ್ದು, ಎಲ್ಲೆಡೆ ಕೋಮು ದ್ವೇಷ ಹರಡುತ್ತಿದ್ದಾರೆ ಎಂದರು.

ಮತಾಂಧತೆಯಲ್ಲಿ ತೇಲಾಡುತ್ತಿರುವ ಜಮೀರ್ ಅಹ್ಮದ್ ಅವರನ್ನು ಕಾಂಗ್ರೆಸ್ ಪಾರ್ಟಿ ಮೊದಲು ಕಿತ್ತಿಗೆಯಲೇಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net