ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಶೂನ್ಯ

D.5 MDG 4P1
ಬಿ.ಸಿ.ದಯಾಕರ್
Published on

ಮೂಡಿಗೆರೆ: ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಯಾವ ಕ್ಷೇತ್ರವೂ ಅಭಿವದ್ಧಿಯಾಗಿಲ್ಲ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆ ಅತ್ಯುತ್ತಮ ಪ್ರವಾಸಿ ತಾಣವಾಗಿದ್ದು, ಇಲ್ಲಿನ ಎಲ್ಲ ಪ್ರವಾಸಿ ತಾಣಗಳ ರಸ್ತೆ ಅಭಿವೃದ್ಧಿಪಡಿಸುವ ಜತೆಗೆ ಚಿಕ್ಕಮಗಳೂರಿನಿಂದ ಮೂಡಿಗೆರೆ ಸಮೀಪದ ಹ್ಯಾಂಡ್‌ಪೋಸ್ಟ್ ವರೆಗೆ ಹಾಗೂ ಬೇಲೂರುವರೆಗೆ ರಸ್ತೆ ಅಗಲೀಕರಣ ಕಾರ್ಯವನ್ನು ಶೀಘ್ರದಲ್ಲೇ ಆರಂಭಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಕೊಲೆ, ಅತ್ಯಾಚಾರ, ಭ್ರೂಣ ಹತ್ಯೆ, ರೇವುಪಾರ್ಟಿ ಹೆಸರಿನಲ್ಲಿ ಗಾಂಜಾದಂತಹ ಮಾದಕ ವಸ್ತು ಬಳಕೆಯಿಂದ ಹೆಣ್ಣು ಮಕ್ಕಳ ಶೋಷಣೆಯಾಗುತ್ತಿದೆ. ಇತ್ತೀಚೆಗೆ ಪಟ್ಟಣದ ಶಾಲೆಯೊಂದರ ಬಳಿ ನಡೆದಿರುವ ಬಿಕ್ಷುಕಿ ಹತ್ಯೆ ಪ್ರಕರಣ ಸಾಕ್ಷಿಯಾಗಿದೆ. ಈ ಪ್ರಕರಣದಲ್ಲಿ ಇದೂವರೆಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ದೂರಿದರು.
ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ತುಳಸೇಗೌಡ ಮಾತನಾಡಿ, ರೈತರಿಗೆ ಮಾರಕವಾದ ರ್ಸೇಸಿ ಕಾಯ್ದೆ ರದ್ದುಪಡಿಸಬೇಕು. ಕಾಫಿ ಕೃಷಿಯನ್ನು ರ್ಸೇಸಿ ಕಾಯ್ದೆಯಿಂದ ಹೊರಗಿಡಬೇಕು. ಕಳಸ ತಾಲೂಕು ರಚನೆಯಾಗಿ ಐದು ವರ್ಷ ಕಳೆದರೂ ಪೂರ್ಣ ತಾಲೂಕಿನ ಸ್ಥಾನಮಾನ ದೊರಕಿಲ್ಲ. ತಾಲೂಕು ಕೇಂದ್ರಕ್ಕೆ ಮೂಲ ಸೌಲಭ್ಯ ಒದಗಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಪರಿಣಾಮಕಾರಿ ಜಾರಿ ಮಾಡಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಪ್ರತಿ ವರ್ಷ ಭತ್ತ ಬೆಳೆಯುವ ರೈತರಿಗೆ ಎಕರೆಗೆ 20 ಸಾವಿರ ರೂ. ಹಾಗೂ ಹಾಲು ಉತ್ಪಾದನೆ ಹೆಚ್ಚಿಸಲು 1 ಜಾನುವಾರಿಗೆ 15 ಸಾವಿರ ರೂ ಪ್ರೋತ್ಸಾಹ ಧನ ಕೊಡಬೇಕು ಎಂದು ಮನವಿ ಮಾಡಿದರು.
ಬ್ಯಾಂಕ್‌ಗಳಲ್ಲಿ ಪ್ರತಿ ಎಕರೆಗೆ ಕನಿಷ್ಟ 3 ಲಕ್ಷ ರೂ.ಸಾಲ ನೀಡಬೇಕು.ಕೇಂದ್ರ ಸರ್ಕಾರದ ಗ್ರಾಮ ಸಡಕ್, ಪಿಎಂ ಅವಾಸ್, ಜಲ ಜೀವನ್ ಮಿಷನ್ ಯೋಜನೆ ಕಟ್ಟು ನಿಟ್ಟಾಗಿ ಜಾರಿ ಮಾಡಬೇಕು. ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆ ಬಗೆಹರಿಸಿ 94ಸಿ ಹಾಗೂ ಾರ್ಮ್ ನಂ.50, 53, 57ರ ಅಡಿ ಅರ್ಜಿಗಳನ್ನು ವಿಲೇ ಮಾಡಿ ಹಕ್ಕು ಪತ್ರ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನದಲ್ಲಿ ಎಲ್ಲ ಸಂಘಟನೆಗಳೊಂದಿಗೆ ಸಮಾಲೋಚಿಸಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net