ಶೂನ್ಯ ಅಭಿವೃದ್ಧಿಯೇ ಸರ್ಕಾರದ ಸಾಧನೆ

Zero development is the government's achievement.
ಕಾಂತುಗೌಡ ಪಾಟೀಲ
Published on

ಚಡಚಣ : ಆರ್ಥಿಕ ದಿವಾಳಿ, ಕುಸಿದ ಕಾನೂನು ವ್ಯವಸ್ಥೆ, ಸಾಮಾಜಿಕ ನ್ಯಾಯದ ತುಷ್ಟೀಕರಣ ಹಾಗೂ ಶೂನ್ಯ ಅಭಿವೃದ್ಧಿಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ಎರಡು ವರ್ಷಗಳ ಸಾಧನೆ ಎಂದು ಚಡಚಣ ಮಂಡಲ ಬಿಜೆಪಿ ಘಟಕದ ಅಧ್ಯಕ್ಷ ಕಾಂತುಗೌಡ ಪಾಟೀಲ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರದ ಕೂಪ. ಕಮೀಷನ್ ಸರ್ಕಾರವಾಗಿದ್ದು, ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ ಹಮ್ಮಿಕೊಂಡಿದ್ದಾರೆ? ಎಂಬುದು ಅರ್ಥವಾಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಮುಖಂಡ ಸಂಜು ಐಹೊಳಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಬಳಸುತ್ತಿದೆ. ಮುಖ್ಯಮಂತ್ರಿಗಳಿಂದ ಹಿಡಿದು ನಾಯಕರೆಲ್ಲರು ಹಗರಣಗಳಲ್ಲಿ ತೊಡಗಿದ್ದಾರೆ. ಹಿಂದು ಕಾರ್ಯಕರ್ತರ ಮೇಲಿನ ಹಲ್ಲೆ, ಮಹಿಳೆಯರ ಮೇಲೆ ಅತ್ಯಾಚಾರ, ಭಾರತ ವಿರೋಧಿ ನೀತಿ , ಅಕ್ರಮ ಚಟುವಟಿಕೆಗಳಿಗೆ ಪ್ರೋತ್ಸಾಹ ಸೇರಿದಂತೆ ಹಲವಾರು ದೇಶ ವಿರೋಧಿ ಚಟುವಕೆಗಳಿಗೆ ಪ್ರೋತ್ಸಾಹ ನೀಡುವುದೇ ಅವರ ಸಾಧನೆಯಾಗಿದೆ ಎಂದರು.

ಬಿಜೆಪಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಕೇದಾರಿ ಸಾಳುಂಕೆ ಮಾತನಾಡಿ, ನಮ್ಮ ಸೈನಿಕರ ಹಾಗೂ ಆಪರೇಷನ್ ಸಿಂಧೂರ ಬಗ್ಗೆ ಕೆಲ ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿರುವುದು ನಾಚಿಕೆಗೇಡು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net