ಅನುದಾನ ನೀಡದೆ ಅಭಿವೃದ್ಧಿ ಶೂನ್ಯ

byn (7)
Published on

ಬೈಂದೂರು: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ದಿವಾಳಿ ಹಂತ ತಲುಪಿದೆ. ಹತ್ತಾರು ಅವೈಜ್ಞಾನಿಕ ನಿಯಮಗಳನ್ನು ಜಾರಿಗೆ ತರುವ ಮೂಲಕ ಜನಸಾವಾನ್ಯರನ್ನು ಆತಂಕಕ್ಕೆ ದೂಡಿದೆ. ಅನುದಾನ ನೀಡದೆ ಅಭಿವೃದ್ಧಿ ಶೂನ್ಯವಾಗಿದೆ. ಹಲವಾರು ಯೋಜನೆಗಳು ಅನುದಾನ ಇಲ್ಲದೆ ತಟಸ್ಥಗೊಂಡಿವೆ ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಹೇಳಿದರು.

ಉಪ್ಪುಂದ ಗ್ರಾಮ ಪಂಚಾಯಿತಿ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದರು. ಬಿಜೆಪಿ ಮುಖಂಡ ಶ್ರೀಗಣೇಶ್ ಗಾಣಿಗ, ಶರತ್ ಕುವಾರ್ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಪ್ರತಿಭಟನೆ ಬಳಿಕ ಗ್ರಾಮ ಪಂಚಾಯಿತಿ ಅಧಿಕಾರಿ ಸುದರ್ಶನ್ ಎಸ್. ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net