

ಮಂಗಳೂರು : ಶೂನ್ಯ ನೆರಳು ವಿಶೇಷ ವಿದ್ಯಮಾನ ವೀಕ್ಷಿಸಲು ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಆ.18ರಂದು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ವಿದ್ಯಮಾನದ ವಿವರಣೆತಿಳಿಯಲು ಹಾಗೂ ಪ್ರಾತ್ಯಕ್ಷಿಕೆ ವೀಕ್ಷಿಸಲು ಅವಕಾಶವಿದೆ.
ಆ.18ರ ದಿನವನ್ನು ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ. ಬೆಳಗ್ಗೆ ಸೂರ್ಯನ ಬೆಳಕು ವ್ಯಕ್ತಿಯ ಮೇಲೆ ಬಿದ್ದಾಗ, ಆ ನೆರಳು ಉದ್ದವಾಗಿರುತ್ತದೆ. ಮಧ್ಯಾಹ್ನವಾಗುತ್ತಿದ್ದಂತೆ (ಮಧ್ಯಾಹ್ನ 12.35ಕ್ಕೆ ) ನೆರಳು ಶೂನ್ಯವಾಗುತ್ತದೆ. ಪುನಃ ಸಾಯಂಕಾಲ ನೆರಳು
ಉದ್ದವಾಗುತ್ತದೆ. ಇಂತಹ ವಿದ್ಯಮಾನ ವರ್ಷದಲ್ಲಿ ಎರಡು ಬಾರಿ ಮಾತ್ರ ಸಂಭವಿಸುತ್ತದೆ (ಮಂಗಳೂರಿನಲ್ಲಿ ಆಗಸ್ಟ್ 18 ಮತ್ತು ಏಪ್ರಿಲ್ 24ರಂದು) ಈ ಶೂನ್ಯ ನೆರಳಿನ ವಿದ್ಯಮಾನವು ಉತ್ತರ ಅಕ್ಷಾಂಶ 23.5ಡಿಗ್ರಿ ಮತ್ತು ದಕ್ಷಿಣ ಆಕಾಂಕ್ಷಿ 23.5 ಡಿಗ್ರಿ ಒಳಗಿನ ಸ್ಥಳಗಳಲ್ಲಿ ಅಕ್ಷಾಂಶದ ಮೇಲೆ ಹೊಂದಿಕೊಂಡು ಬೇರೆ ಬೇರೆ ಸ್ಥಳಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಸಂಭವಿಸುತ್ತದೆ.
ಮೋಡ ಇಲ್ಲದ ವಾತಾವರಣ ಈ ವಿದ್ಯಮಾನ ವೀಕ್ಷಿಸಲು ಅನುಕೂಲಕರ .ಶಾಲೆಗಳಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಇದನ್ನು ಸುಲಭವಾಗಿ ವೀಕ್ಷಿಸಬಹುದು ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.........................