ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಮುಗಿಯಲಿ

18 Hanumasagara 1
ಹನುಮಸಾಗರ ಸಮೀಪದ ನಿಲೋಗಲ್ಲ ಗ್ರಾಮದಲ್ಲಿ ನಿರ್ಮಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕವನ್ನು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಪರಿಶೀಲಿಸಿದರು. ತಾಪಂ ಇಒ ಶಿವಪ್ಪ ಸೂಬೇದಾರ, ಪಿಡಿಒ ಚಂದಪ್ಪ ಕವಡಿಕಾಯಿ, ಗ್ರಾಪಂ ಅಧ್ಯಕ್ಷೆ ಮಂಜುಳಾ ಭೀಮನಗೌಡ ಪಾಟೀಲ್ ಇತರರಿದ್ದರು.
Published on

ಹನುಮಸಾಗರ: ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಸಮಯಕ್ಕೆ ಮುಗಿಸಬೇಕು ಎಂದು ಜಿಪಂ ಸಿಎಇಒ ರಾಹುಲ್ ರತ್ನಂ ಪಾಂಡೆ ಸೂಚಿಸಿದರು.

ಸಮೀಪದ ನಿಲೋಗಲ್ಲ ಗ್ರಾಮದಲ್ಲಿ ಗ್ರಾಪಂನಿಂದ ನಿರ್ಮಾಣ ಮಾಡುತ್ತಿರುವ ಘನ ತ್ಯಾಜ್ಯ ವಿಲೇವಾರಿ ಹಾಗೂ ಮಲ ತ್ಯಾಜ್ಯ ನಿರ್ವಹಣಾ ಘಟಕಗಳ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದರು. ಕಾಮಗಾರಿಗಳ ಅನುಷ್ಠಾನಕ್ಕೆ ಬಹಳಷ್ಟು ಸಮಯ ತೆಗೆದುಕೊಳ್ಳಬಾರದು. ಯಾವುದೇ ಕಾರಣ ನೀಡಿ ಕಾಮಗಾರಿ ವಿಳಂಬ ಮಾಡಬಾರದು ಎಂದರು.

ನಿಗದಿತ ಸಮಯದಲ್ಲೇ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟ ಕಾಯ್ದುಕೊಳ್ಳದಿದ್ದರೆ, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ಗ್ರಾಪಂನಿಂದ ಸ್ವಚ್ಛ ಭಾರತದ ಬಗ್ಗೆ ಅರಿವು ಮೂಡಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಸಿ, ಒಣ ಕಸವನ್ನು ಬೇರ ಪಡಿಸಿ ಸಂಗ್ರಹಿಸಬೇಕು. ತಾಲೂಕಿನಾದ್ಯಂತ ವಿವಿಧ ಯೋಜನೆಗಳಡಿ ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳನ್ನು ಸಾರ್ವಜನಿಕರ ಬಳಕೆಗೆ ನೀಡಬೇಕು ಎಂದು ಸೂಚಿಸಿದರು.

ನಂತರ ಹಚನೂರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಿಸಲಾಗಿರುವ ಸಮುದಾಯ ಶೌಚಗೃಹ, ಹನುಮನಾಳ ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಿಸುತ್ತಿರುವ ಬೂದು ನೀರು ನಿರ್ವಹಣೆ ಕಾಮಗಾರಿ ಪರಿಶೀಲಿಸಿದರು. ತಾಪಂ ಇಒ ಶಿವಪ್ಪ ಸೂಬೇದಾರ, ಪಿಡಿಒ ಚಂದಪ್ಪ ಕವಡಿಕಾಯಿ, ನಿಲೋಗಲ್ಲ ಗ್ರಾಪಂ ಅಧ್ಯಕ್ಷೆ ಮಂಜುಳಾ ಭೀಮನಗೌಡ ಪಾಟೀಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net