ಅ.1ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ: ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ಹೇಳಿಕೆ

Zilla Panchayat Former President press conference Mandya
Published on

ಮಂಡ್ಯ: ದಲಿತ ಹಾಗೂ ಒಕ್ಕಲಿಗ ಸಮುದಾಯ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ರಾಜ್ಯದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ಅ.1ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನಾ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ತಿಳಿಸಿದರು.

ಶಾಸಕ ಮುನಿರತ್ನ ಮಾತನಾಡಿರುವ ಆಡಿಯೋ ಬಹಿರಂಗಗೊಂಡಿದೆ. ಈ ಧ್ವನಿ ಮುದ್ರಣದಲ್ಲಿ ಮಹಿಳೆಯರು ಒಳಗೊಂಡಂತೆ ಎರಡು ಸಮುದಾಯದ ಬಗ್ಗೆ ಅತ್ಯಂತ ಕೀಳು ಮಟ್ಟದ ಭಾಷೆ ಬಳಸಿ ಅಶ್ಲೀಲ ಮತ್ತು ಅಸಭ್ಯವಾಗಿ ನಿಂದಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುನಿರತ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ನಿಗದಿತ ಕಾಲಮಿತಿಯಲ್ಲಿ ಎಸ್‌ಐಟಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಂದು ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರೃ ಉದ್ಯಾನದವರೆಗೆ ರ‌್ಯಾಲಿ ಆಯೋಜಿಸಲಾಗಿದೆ ಎಂದು ವಿವರಿಸಿದರು.

ನಗರಸಭೆ ಸದಸ್ಯ ಶ್ರೀಧರ್, ನಾಮನಿರ್ದೇಶಿತ ಸದಸ್ಯ ಸುಮಂತ್, ಲವ, ಸಿದ್ದರಾಜು, ಪ್ರಾಣೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net