ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ಕಾಲೇಜುಗಳ ವಲಯ ಪುರುಷರ ಕಬಡ್ಡಿ ಪಂದ್ಯಾವಳಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಇಂದ್ರಪ್ರಸ್ಥ ಒಳಾಂಗಣದಲ್ಲಿ ಮೇ 15ರಂದು ಪ್ರಾರಂಭವಾಗಲಿದೆ.
14 ಕಾಲೇಜುಗಳು ಭಾಗಿ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಂಗಳೂರು ವಲಯದ ಅಂತರ್ ಕಾಲೇಜುಗಳ ಪಂದ್ಯಾಟಗಳು ನಡೆಯಲಿವೆ. ವಲಯದ ಸುಮಾರು 14 ಕಾಲೇಜುಗಳು ಸ್ಪರ್ಧಿಸಲಿವೆ. ಪ್ರೊ.ಕಬಡ್ಡಿ ಖ್ಯಾತಿಯ ಆಟಗಾರ ಗಗನ್ ಗೌಡ ಉದ್ಘಾಟಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಟಿ. ಅಧ್ಯಕ್ಷತೆ ವಹಿಸಲಿದ್ದಾರೆ.
18, 19ರಂದು ರಾಜ್ಯಮಟ್ಟದ ಕಬಡ್ಡಿ
ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಇದೇ ಇಂದ್ರಪ್ರಸ್ಥ ಸಭಾಂಗಣದಲ್ಲಿ ಮೇ 18 ಮತ್ತು 19ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂತರ್ ವಲಯ ರಾಜ್ಯಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ನಡೆಯಲಿದೆ. ರಾಜ್ಯದ 16 ತಂಡಗಳು ಸೆಣಸಾಡಲಿವೆ. ಅಂತಾರಾಷ್ಟ್ರೀಯ ಕಬ್ಬಡ್ಡಿ ತರಬೇತುದಾರ ರವೀಂದ್ರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ವಿಭಾಗದ ಡೆಪ್ಯುಟಿ ರೇಂಜ್ ಅರಣ್ಯ ಅಧಿಕಾರಿ ರಂಜಿತ್ ಕುಮಾರ್ ಎಸ್. ಉಪಸ್ಥಿತರಿರಲಿದ್ದಾರೆ.
ಸಮಾರೋಪ ಸಮಾರಂಭ
ಸಮಾರೋಪ ಸಮಾರಂಭದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಅಶೋಕ್ ಕುಮಾರ್ ಟಿ., ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.