ವಲಯಮಟ್ಟದ ಚೆಸ್ ಟೂರ್ನಿ

chess
ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ-ಬಾಲಕಿಯರ ಚೆಸ್ ಟೂರ್ನಿಯನ್ನು ನರಸಿಂಹ ದೇವಾಡಿಗ ಮತ್ತು ಶೇಖರ್ ಖಾರ್ವಿ ಉದ್ಘಾಟಿಸಿದರು
Published on

ಗಂಗೊಳ್ಳಿ: ಬೈಂದೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನಾವುಂದದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಚೆಸ್ ಟೂರ್ನಿ ಮಂಗಳವಾರ ನಡೆಯಿತು.

ನಾವುಂದ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ ಮತ್ತು ಕಿರಿಮಂಜೇಶ್ವರ ಪಂಚಾಯಿತಿ ಅಧ್ಯಕ್ಷ ಶೇಖರ್ ಖಾರ್ವಿ ಉದ್ಘಾಟಿಸಿದರು. ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ ಎಸ್, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಉಮಾನಾಥ ಕಾಪು, ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ, ಗುರುರಾಜ್, ಬಾಬು ಪೂಜಾರಿ, ಉಮಾನಾಥ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿದರು. ಶಶಿಕಲಾ ವಂದಿಸಿದರು. ಉಪನ್ಯಾಸಕ ಉದಯ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net