ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

mkg1b
Published on

ಬಸವಾಪಟ್ಟಣ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿಯಾಗಲಿವೆ ಎಂದು ಬಸವಾಪಟ್ಟಣ ಗ್ರಾಪಂ ಅಧ್ಯಕ್ಷ ಬಿ.ಜಿ. ಸಚಿನ್ ಹೇಳಿದರು.

ಗುರವಾರ ಇಲ್ಲಿನ ಎಲ್. ಸಿದ್ದಪ್ಪ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಬಸವಾಪಟ್ಟಣ ಹಾಗೂ ಚಿರಡೋಣಿ ಕ್ಲಸ್ಟರ್‌ಗಳ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧಾಳುಗಳು ಕ್ರೀಡೆಯನ್ನು ಕ್ರೀಡೆಯಾಗಿ ಸ್ವೀಕರಿಸಬೇಕು. ಸೋಲನ್ನು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದರು.

ಕಾಂಗ್ರೆಸ್ ಮುಖಂಡ ಬಿ.ಜಿ. ನಾಗರಾಜ್, ಬಿಜೆಪಿ ಮುಖಂಡ ಎಚ್. ಹೊನ್ನಪ್ಪ, ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಆರಕ್ಷಕ ಠಾಣೆಯ ರವಿಕುಮಾರ್ ಮಾತನಾಡಿದರು.

ಗ್ರಾಪಂ ಉಪಾಧ್ಯಕ್ಷೆ ಕುಸುಮಾ ಬಸವರಾಜಪ್ಪ, ಮಾಜಿ ಅಧ್ಯಕ್ಷ ಸೈಯದ್ ರಫೀಕ್, ಸದಸ್ಯ ರಮೇಶ್, ಕಾಂಗ್ರೆಸ್ ಮುಖಂಡ ಆಲಂ ಪಾಷಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಲ್.ಜಿ. ಮಧುಕುಮಾರ್, ಪ್ರಾಚಾರ್ಯ ಪದ್ಮಪ್ಪ, ಎಸ್‌ಡಿಎಂಸಿ ಅಧ್ಯಕ್ಷೆ ನರಸಮ್ಮ, ಇಸಿಒ ಬಿ.ಆರ್. ಬಸಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net