

ಮಾನ್ವಿ: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿಗಳು ವೇದಿಕೆಯಾಗಿವೆ ಎಂದು ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ಕುಬೇರಪ್ಪ ತಿಳಿಸಿದರು.
ಪಟ್ಟಣದ ಬಿವಿಆರ್ ಶಾಲೆಯಲ್ಲಿ ಮಾನವಿ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಬೌದ್ಧಿಕ ಮಟ್ಟ ಹೆಚ್ಚಾಗಲಿದೆ ಎಂದರು.
ಬಿವಿಆರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿವಿ ರಡ್ಡಿ ಮಾತನಾಡಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಮೆಟ್ಟಿಲು ಎಂದು ಹೇಳಿದರು.
ಪುರಸಭೆ ಸದಸ್ಯ ಸೂರ್ಯಕುಮಾರಿ, ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಸುರೇಶ ಕುರ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕು ಅಧ್ಯಕ್ಷ ಸಂಗಮೇಶ ಮುಧೋಳ, ಖಾಸಗಿ ಶಾಲಾ ಶಿಕ್ಷಕರ ಒಕ್ಕೂಟದ ಅಧ್ಯಕ್ಷ ಶಫುದ್ದೀನ್ ಪೋತ್ನಾಳ, ಸರ್ಕಾರಿ ನೌಕರರ ಸಂಗದ ಕಾರ್ಯದರ್ಶಿ ಹಂಪಣ್ಣ ಚಂಡೂರು, ಶಿಕ್ಷಣ ಸಂಯೋಜಕ ಮಹೇಶ, ಸಿಆರ್‌ಪಿ ಆಶಾ, ಮುಕೀಮ್, ಶಿಕ್ಷಣ ಇಲಾಖೆಯ ವೆಂಕಟೇಶ, ಅಶೋಕಕುಮಾರ, ಬಿವಿಆರ್ ಶಾಲೆಯ ಮುಖ್ಯ ಶಿಕ್ಷಕ ಸರ್‌ಮತ್‌ಖಾನ್ ಇನ್ನಿತರರು ಇದ್ದರು.