ವಲಯಮಟ್ಟದ ವಾಲಿಬಾಲ್ ಟೂರ್ನಿ

vollyball
ವಾಲಿಬಾಲ್ ಪಂದ್ಯಾಟವನ್ನು ಕೊಯಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಷ್ಪಾ ಸುಭಾಷ್ ಶೆಟ್ಟಿ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ, ಗ್ರಾಪಂ ಸದಸ್ಯ ಚಿದಾನಂದ ಪಾನ್ಯಾಲು, ಕ್ಲಸ್ಟರ್ ಸಿಆರ್‌ಪಿ ಮಹೇಶ್ ಇದ್ದರು.
Published on

ಕಡಬ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಕಡಬ ವಲಯಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟ ಮಂಗಳವಾರ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕೊಯಿಲ ಪಂ ಅಧ್ಯಕ್ಷೆ ಪುಷ್ಪಾ ಸುಭಾಶ್ ಶೆಟ್ಟಿ ಚಾಲನೆ ನೀಡಿದರು. ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ ಅಧ್ಯಕ್ಷತೆ ವಹಸಿದ್ದರು. ಗ್ರಾಪಂ ಸದಸ್ಯ ಚಿದಾನಂದ ಪಾನ್ಯಾಲು, ಕ್ಲಸ್ಟರ್ ಸಿಆರ್‌ಪಿ ಮಹೇಶ್ ಶುಭ ಹಾರೈಸಿದರು. ಗ್ರಾಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ ಉಪಸ್ಥಿತರಿದ್ದರು. ಕಡಬ ವಲಯ ಕ್ರೀಡಾಕೂಟದ ನೋಡಲ್ ಅಧಿಕಾರಿ ಚಂದ್ರಶೇಖರ ಪ್ರಸ್ತಾವಿಸಿದರು. ಮುಖ್ಯಶಿಕ್ಷಕಿ ವಾರಿಜಾ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವನಜಾ ವಂದಿಸಿದರು. ಶಿಕ್ಷಕ ವೆಂಕಟೇಶ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net