ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ

Zone Level High School Division Throwball Tournament
Published on

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೨೦೨೩-೨೪ ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಶನಿವಾರ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ಶ್ರೀಧರ್ ಶೆಟ್ಟಿ ವಹಿಸಿದ್ದರು.

ಬಾಲಕರ ವಿಭಾಗದಲ್ಲಿ ಪ್ರಥಮ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ. ದ್ವಿತೀಯ ಸಂತ ಲಾರೆನ್ಸ್ ಪ್ರೌಢಶಾಲೆ ಕುಡ್ಪಲ್ತಡ್ಕ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನ, ದ್ವಿತೀಯ ಸರಕಾರಿ ಹಿರಿಯ ಪ್ರೌಡಶಾಲೆ ಸೂರ್ಯ ಗಳಿಸಿತು.

ಜಿಲ್ಲಾ ದೈನಿಕ ಶಿಕ್ಷಣ ಸಂಘದ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ, ವಿಟ್ಲ ಸಂಪನ್ಮೂಲ ಅಧಿಕಾರಿ ಬಿಂದು, ಪ್ರಾಂಶುಪಾಲ ಜಯರಾಮ ರೈ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ ಉಪಸ್ಥಿತರಿದ್ದರು.

ಸಹ ಶಿಕ್ಷಕರಾದ ಗೀತಾ ಸ್ವಾಗತಿಸಿದರು. ವಿಟ್ಲದ ದೈಹಿಕ ಶಿಕ್ಷಣ ನೋಡೆಲ್ ಅಧಿಕಾರಿ ರಾಜೇಂದ್ರ ರೈ ಪ್ರಾಸ್ತಾವನೆಗೈದರು. ಸೌಮ್ಯ ಸಾವಿತ್ರಿ ವಂದಿಸಿದರು. ಕವಿತಾ ಎಸ್ ಗೌಡ ಕಾರ್ಯಕ್ರಮ ನಿರೂಪಿಸಿದರು. ಜೇಸಿ ಸಂಸ್ಥೆಯ ದೈಹಿಕ ಶಿಕ್ಷಕ ಭಾನುಪ್ರಕಾಶ್ ಹಾಗೂ ಶಶಿಕಲಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net