ವಲಯ ಮಟ್ಟದ ಥ್ರೋಬಾಲ್ ಟೂರ್ನಿ

throwball
ಶ್ರೀವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಠಾರದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢ ಶಾಲಾ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಕೆ.ರಾಧಾಕೃಷ್ಣ ಶೆಣೈ ಉದ್ಘಾಟಿಸಿದರು.
Published on

ಕುಂದಾಪುರ: ಉಡುಪಿ ಜಿಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ಶಾಲೆ ವಠಾರದಲ್ಲಿ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಥ್ರೋಬಾಲ್ ಟೂರ್ನಿ ಶುಕ್ರವಾರ ನಡೆಯಿತು.

ಶ್ರೀ ವೆಂಕಟರಮಣ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಟೂರ್ನಿ ಉದ್ಘಾಟಿಸಿದರು. ತಾಲೂಕು ಯುವಜನ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಸುಬ್ರಹ್ಮಣ್ಯ, ವಿವಿಧ ವಿಭಾಗದ ಮುಖ್ಯ ಶಿಕ್ಷಕರಾದ ಪ್ರಮೀಳಾ ಡಿಸೋಜ, ರೇಷ್ಮಾ ಡಿಸೋಜ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಯೋಜಕ ಶಿಕ್ಷಕ ರವೀಂದ್ರ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನಾಗೇಂದ್ರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net