ಪ್ರಬಂಧ ಸ್ಪರ್ಧೆ ಅಚ್ಚುಕಟ್ಟಾಗಿರಲಿ

zp ceo koppal gandhi jayanti program
Published on

ಕೊಪ್ಪಳ: ಜಿಲ್ಲಾದ್ಯಂತ ಬಾಪೂಜಿ ಜನ್ಮದಿನ ಅಂಗವಾಗಿ ಪ್ರಬಂಧ ಸರ್ಧೆ ಆಯೋಜಿಸುವಂತೆ ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಮಹಾತ್ಮ ಗಾಂಧಿ 155ನೇ ಜಯಂತಿ ಅಂಗವಾಗಿ ವಿದ್ಯಾರ್ಥಿ, ಯುವ ಜನರಲ್ಲಿ ಬಾಪು ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಬಗ್ಗೆ ತಿಳಿಸಬೇಕಿದೆ. ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ಜಿಲ್ಲೆಯಲ್ಲಿಯೂ ಸ್ಪರ್ಧೆ ಏರ್ಪಡಿಸಿ. ಎಲ್ಲ ಶಾಲಾ, ಕಾಲೇಜುಗಳಲ್ಲಿ ಹಮ್ಮಿಕೊಳ್ಳಿ. ಎಲ್ಲೆಡೆಯಿಂದ ಬಂದ ಪ್ರಬಂಧ ಒಟ್ಟುಗೂಡಿಸಿ ಮೌಲ್ಯಮಾಪನ ಮಾಡಿ. ಪ್ರೌಢ, ಪಿಯು, ಪದವಿ, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ತಲಾ ಮೂರು ಬಹುಮಾನ ವಿತರಿಸಿ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಪ್ರಬಂಧಗಳನ್ನು ರಾಜ್ಯಮಟ್ಟಕ್ಕೆ ಕಳಿಸಿಕೊಡಿ. ಅಕ್ಟೋಬರ್​ 2 ರ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ಕೊಡಲು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.

ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿ, ಮಹಾತ್ಮ ಗಾಂಧಿ 155ನೇ ಜಯಂತಿ ಅಂಗವಾಗಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮಜರುಗಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಹಕರಿಸಲು ಮನವಿ ಮಾಡಿದರು.

ಡಿಡಿಪಿಯು ಜಗದೀಶ್​ ಜಿ.ಎಚ್​., ಕೊಪ್ಪಳ ವಿಶ್ವ ವಿದ್ಯಾಲಯದ ನಿರ್ದೇಶಕ ಡಾ.ಪ್ರಕಾಶ ಯಳವಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬಿಲ್ಖಸ್​ ಜಹಾನ್​, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಕ ಬಸವರಾಜ ನೆಲಗಣಿ, ವಾರ್ತಾ ಇಲಾಖೆಯ ಭರತ ಕುಮಾರ್​ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net