ನಾಲ್ಕು ಪ್ರಕರಣದಲ್ಲಿ ಹಣ ವಾಪಸ್: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾಹಿತಿ

1 (3)
Published on

ಮಂಡ್ಯ: ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ ಹಣದ ಪೈಕಿ ನಾಲ್ಕು ಪ್ರಕರಣವನ್ನು ಇತ್ಯರ್ಥಗೊಳಿಸಿ ವಾರಸುದಾರರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆದ ಹಣ ಬಿಡುಗಡೆ ಸಮಿತಿ ಅಧ್ಯಕ್ಷ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಹಣ ಬಿಡುಗಡೆ ಸಮಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಾಖಲಾಗಿದ್ದ 21 ಪ್ರಕರಣಗಳ ಪೈಕಿ ಎರಡನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಹಿಸಲಾಗಿದೆ. ಉಳಿದ 19 ಪ್ರಕರಣಗಳಲ್ಲಿ 11 ಪ್ರಕರಣವನ್ನು ಕಳೆದ ಬಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಂಡು ವಾರಸುದಾರರಿಗೆ ಹಣ ಹಿಂತಿರುಗಿಸಿದ್ದೇವೆ. ಅದರಂತೆ ಇಂದಿನ ಸಭೆಯಲ್ಲಿ 4 ಪ್ರಕರಣಗಳಲ್ಲಿ ಒಟ್ಟು 11 ಲಕ್ಷ ರೂವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಉಳಿದಂತೆ 4 ಪ್ರಕರಣಗಳನ್ನು ವಾರಸುದಾರರು ಸೂಕ್ತ ದಾಖಲೆ ಒದಗಿಸಿದ ನಂತರ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಖಜಾನೆಯ ಉಪ ನಿರ್ದೇಶಕ ಸಿದ್ದಲಿಂಗಸ್ವಾಮಿ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಧನಂಜಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net