ಜಲಜೀವನ ಮಿಷನ್‌ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ ಶಶಿ

CEO VIST Mundgod
Published on

ಕಾರವಾರ: ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲಾದ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದು, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲ್ಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಗಿನಕೊಪ್ಪ, ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಮಲಬಾರ್ ಕಾಲೋನಿ ಮತ್ತು ನಂದಿಗಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸನಾಳ ಗ್ರಾಮದಲ್ಲಿ ಜೆಜೆಎಮ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪಡೆದುಕೊಂಡ ಮನೆಗಳಿಗೆ ಭೇಟಿ ನೀಡಿ, ನೀರಿನ ಪೂರೈಕೆ, ಶುದ್ಧತೆ

ಮತ್ತು ಉಪಯೋಗದ ಕುರಿತು ಫಲಾನುಭವಿಗಳಿಂದ ಮಾಹಿತಿ ಪಡೆದರು.

ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಾಶಯಕ್ಕೆ ಭೇಟಿ ನೀಡಿ, ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಪ್ರಗತಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಯೋಜನೆಯಂತೆ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮುಂಡಗೋಡ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ಪ, ಮುಂಡಗೋಡ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ್ವರಿ ಕದಂ, ಜೆಜೆಎಮ್

ಡಿಪಿಎಮ್ ವೆಂಕಟೇಶ್ ನಾಯ್ಕ, ತಾಲೂಕು ಮಟ್ಟದ ಅಧಿಕಾರಿಗಳು, ಸಂಬAಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ  ಜಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net