ಶಿರಸಿ ತಾಲೂಕಿನಲ್ಲಿ ಸಿಇಒ ಸಂಚಾರ

ZP Ceo Visit
Published on

ಕಾರವಾರ:ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರ ಕಾಂದೂ ರವರು ಮಂಗಳವಾರ ಶಿರಸಿ ತಾಲೂಕಿನ ವಿವಿಧೆಡೆ ಭೇಟಿ ನೀಡಿದರು.

ಬಿಸಲಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿನೀಡಿ ಶಿಥಿಲಗೊಂಡ ಶಾಲಾ ಕಟ್ಟಡ ಪರಿಶೀಲಿಸಿ ಅದರ ದುರಸ್ತಿಯ ಬದಲು ಮರು ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸುವಂತೆ ಸೂಚನೆ ನೀಡಿದರು.
ಇಟಗುಳಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಕಲ್ಯಾಣಿ ಕಾಮಗಾರಿ, ಸೋಂದಾ ಗ್ರಾಪಂ ವ್ಯಾಪ್ತಿಯ ಔಡಾಳ ಗ್ರಾಮದಲ್ಲಿ ಜೈ ಮಾರುತಿ ಸ್ವಸಹಾಯ ಸಂಘದವರು ನಡೆಸುತ್ತಿರುವ ಅಡಕೆಹಾಳೆ ತಟ್ಟೆ ತಯಾರಿಕಾ ಘಟಕ, ಸಾಲ್ಕಣಿ ಗ್ರಾಪಂ ವ್ಯಾಪ್ತಿಯ ಬಾಲಕರ ವಸತಿ ನಿಲಯ, ದೇವನಹಳ್ಳಿ ಗ್ರಾಪಂ ವ್ಯಾಪ್ತಿಯ ಮಹಾತ್ಮಗಾಂಧಿ ಆಟದ ಮೈದಾನ, ಬಿಸಲಕೊಪ್ಪ ಗ್ರಾಪಂ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಚನಳ್ಳಿ ಗ್ರಾಮದಲ್ಲಿ ಪ್ರಗತಿಯಲ್ಲಿರುವ ಜೆಜೆಎಂ ಕಾಮಗಾರಿ ಸ್ಥಳ, ಹುಲೇಕಲ್ ಗ್ರಾಪಂ ವ್ಯಾಪ್ತಿಯ ಅಂಗನವಾಡಿ, ಕಡಗೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದುಕೊಂಡು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಇದನ್ನೂ ಓದಿ:ಕನ್ನಡದ ಮೇಲಿನ ಅಭಿಮಾನ ಗಟ್ಟಿಯಾಗಿರಲಿ
ತಾಪಂ ಪ್ರಭಾರ ಇಒ ಸತೀಶ್ ಹೆಗಡೆ, ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಬಿ.ವೈ. ರಾಮಮೂರ್ತಿ ಹಾಗೂ ಇತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net