ಖಾನಾಪುರ ತಾಪಂಗೆ ಜಿಪಂ ಸಿಇಒ ಭೇಟಿ

rahul shindhe ceo
Published on

ಖಾನಾಪುರ: ಇಲ್ಲಿನ ತಾಪಂ ಸೇರಿ ವಿವಿಧ ಇಲಾಖೆ ಕಚೇರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಗುರುವಾರ ಭೇಟಿ ನೀಡಿ ಸಿಬ್ಬಂದಿ ಹಾಜರಾತಿ ಹಾಗೂ ಮೂಲ ಸೌಕರ್ಯ ಪರಿಶೀಲಿಸಿದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡಬೇಕು, ಸಿಬ್ಬಂದಿ ಲಭ್ಯವಿರಬೇಕು. ಸಮಯ ಪಾಲನೆ ಜತೆಗೆ ತಕ್ಷಣ ಸ್ಪಂದಿಸಬೇಕು ಎಂದು ಸೂಚಿಸಿದರು. ಆಸ್ಪತ್ರೆ ಆವರಣದಲ್ಲಿ ಲಭ್ಯವಿರುವ ಸ್ಥಳದಲ್ಲಿ ಎನ್‌ಆರ್‌ಎಲ್‌ಎಂ ಯೋಜನೆಯಡಿ ಕ್ಯಾಂಟೀನ್ ಆರಂಭಿಸುವಂತೆ ತಾಪಂ ಇಒಗೆ ನಿರ್ದೇಶನ ನೀಡಿದರು.

ಸ್ಥಳೀಯ ಶಾಸಕರ ಮಾದರಿ ಶಾಲೆಯಲ್ಲಿ ನಿರ್ಮಾಣ ಹಂತದ ಶೌಚಗೃಹ ಕಾಮಗಾರಿ ವೀಕ್ಷಿಸಿದರು. ಬಳಿಕ ಮಕ್ಕಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. ತಾಪಂ ಇಒ ರಮೇಶ ಮೇತ್ರಿ, ಸಹಾಯಕ ಕಾರ್ಯಪಾಲಕ ಅಭಿಯಂತ ರಾಜೇಂದ್ರ ಜಾಧವ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ವಿಜಯಕುಮಾರ ಕೋತಿನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net