ಮಜೂರು ಗ್ರಾಪಂಗೆ ಜಿಪಂ ಸಿಇಒ ಭೇಟಿ

pdb
Published on

ಪಡುಬಿದ್ರಿ: ಉಡುಪಿ ಜಿಪಂ ಸಿಇಒ ಪ್ರತೀಕ್ ಬಾಯಲ್ ಮಂಗಳವಾರ ಮಜೂರು ಗ್ರಾಪಂಗೆ ಭೇಟಿ ನೀಡಿ ಗ್ರಾಪಂ ಸಮಗ್ರ ಅಭಿವೃದ್ಧಿ ಹಾಗೂ ಸಮಸ್ಯೆಗಳ ಬಗ್ಗೆ ಮತ್ತು ಐಎಸ್‌ಪಿಆರ್‌ಎಲ್ ಯೋಜನೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದರು.

2024-25ನೇ ಸಾಲಿನ ಶೇ.25, ಶೇ.5, ಶೇ.2ರ ಖರ್ಚು ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಗ್ರಾಪಂ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಜಿಪಂ ಮತ್ತು ಶಾಸಕರ ಸಹಕಾರದಿಂದ ಮಾದರಿ ಗ್ರಾಪಂ ಮಾಡುವ ಬಗ್ಗೆ ಆಶಯ ವ್ಯಕ್ತಪಡಿಸಿದರು. ಗ್ರಾಪಂ ಸರ್ವತೋಮುಖ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದರು.

ಜಿಪಂ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್, ಕಾಪು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೇಮ್ಸ್ ಡಿಸಿಲ್ವ, ಸಹಾಯಕ ನಿರ್ದೇಶಕಿ ಚಂದ್ರಕಲಾ, ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷೆ ಮಂಜುಳಾ ಆಚಾರ್ಯ, ಸದಸ್ಯರು, ಪಿಡಿಒ ವಿಲಾಸಿನಿ, ಗ್ರಾಮ ಆಡಳಿತ ಅಧಿಕಾರಿ ಲೆಸ್ಟನ್ ಕರ್ನೆಲಿಯೋ, ಕಾರ್ಯದರ್ಶಿ ಪ್ರಸಾದ್ ಭಂಡಾರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net