ವಿವಿಧ ಗ್ರಾಪಂಗಳಿಗೆ ಜಿಪಂ ಸಿಇಒ ಭೇಟಿ

ZP CEO VISIT TO SIDDAPURA
Published on

ಸಿದ್ದಾಪುರ: ತಾಲೂಕಿನ ದೊಡ್ಮನೆ, ಇಟಗಿ ಹಾಗೂ ಹಲಗೇರಿ ಗ್ರಾಪಂಗಳಿಗೆ ಜಿಪಂ ಸಿಇಒ ಈಶ್ವರ್ ಕುಮಾರ್ ಕಾಂದೂ ಮಂಗಳವಾರ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದರು.

ತಾಲೂಕಿನಲ್ಲಿ ವಿವಿಧ ಯೋಜನೆಯಲ್ಲಿ ನಿರ್ವಣಗೊಂಡ ಶೌಚಾಲಯ, ಗ್ರಂಥಾಲಯ ಹಾಗೂ ಹಲಗೇರಿ ಗ್ರಾಪಂ ವ್ಯಾಪ್ತಿಯಲ್ಲಿರುವ ನಿಪ್ಲಿ ಫಾಲ್ಸ್ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ರ್ಚಚಿಸಿ, ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆ ನೀಡಿದರು.

ದೊಡ್ಮನೆ ಗ್ರಾಪಂಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿಯ ಕುರಿತು ಮಾಹಿತಿ ಪಡೆದು ಗ್ರಾಪಂ ನಿರ್ವಹಣೆ ಕುರಿತು ಶ್ಲಾಘಸಿದರು. ನಂತರ ಸ್ಥಳೀಯ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು. ಶಾಲಾ ಅಡಿಗೆ ಕೋಣೆ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪರಿಶೀಲಿಸಿ ಸ್ವಚ್ಛತೆ ಕುರಿತು ಜಾಗೃತಿ ವಹಿಸಲು ಸೂಚಿಸಿದರು.

ದೊಡ್ಮನೆ ಪ್ರೌಢಶಾಲೆಗೆ ಭೇಟಿ ನೀಡಿ ವಿಜ್ಞಾನ ಮತ್ತು ಇಂಗ್ಲಿಷ್ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಕ್ಕಳ ವಿದ್ಯಾಭ್ಯಾಸ ಪ್ರಗತಿಗೆ ಅಗತ್ಯವಾದ ಕ್ರಮವನ್ನು ತಾಲೂಕಿನಲ್ಲಿ ರೂಪಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ತಾಪಂ ಇಒ ದೇವರಾಜ ಹಿತ್ತಲಕೊಪ್ಪ, ತಾಪ ಯೋಜನಾಧಿಕಾರಿ ಬಸವರಾಜ, ಶಿಕ್ಷಣ, ಬಿಸಿಎಂ , ಜೆಜೆಎಂ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಸದಸ್ಯರು, ತಾಪಂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net