ಎಪ್ರಿಲ್ 1 ರಿಂದ ಕಡ್ಡಾಯವಾಗಿ ಸಮುದಾಯ ಕಾಮಗಾರಿ ಆರಂಭ ಮಾಡಿ : ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಸೂಚನೆ.

IMG-20230328-WA0068
Published on

ಗದಗ: ಪ್ರತಿ ಗ್ರಾಮ ಪಂಚಾಯತಿಯಲ್ಲೂ ಎಪ್ರಿಲ್ 1 ರಿಂದ ಕಡ್ಡಾಯವಾಗಿ ಸಮುದಾಯ ಕಾಮಗಾರಿ ಆರಂಭ ಮಾಡಲು ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಸೂಚನೆ ನೀಡಿದರು.

ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆಧಾರ ಕಾರ್ಡ್ ಸಿಡಿಂಗ್, ಅಥೇಂಟಿಕೇಷನ್, ಮಹಿಳೆಯರ ಭಾಗವಹಿಸುವಿಕೆ, 7 ರಜಿಸ್ಟರ್, 21 ಅಂಶಗಳ ಕಾಮಗಾರಿ ಪಟ್ಟಿ, ಜಿಯೋ ಟ್ಯಾಗಿಂಗ್, ಕೆಎಂಎಲ್ ಪೈಲ್, ಜಲ ಸಂಜೀವಿನಿ ಕ್ರಿಯಾ ಯೋಜನೆ, ಸೇರಿದಂತೆ ಇತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಯಿತು. ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಪ್ರಸಕ್ತ ಸಾಲಿನಿಂದ ಜಲಸಂಜೀವಿನಿ ಪರಿಕಲ್ಪನೆಯಡಿ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಮಾಡುವುದು ಉದ್ದೇಶವಾಗಿದೆ, ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೈಸರ್ಗಿಕ ನಿರ್ವಹಣಾ ಉಪಚಾರದ ಸರೋವರ, ಗ್ರಾಮೀಣ ಕೆರೆ ಹೂಳೆತ್ತುವ ಕಾಮಗಾರಿ, ಕೃಷಿಹೊಂಡ, ಬದು ನಿರ್ಮಾಣ, ಕೊಳವೆ ಭಾವಿ ಮರುಪೂರಣ ಘಟಕ, ನಾಲಾ ಅಭಿವೃದ್ಧಿ, ಅರಣೀಕರಣ, ರೇಷ್ಮೆಬೆಳೆ, ತೋಟಗಾರಿಕೆ, ಗೋಕಟ್ಟೆ , ನಿರ್ಮಾಣ ಇನ್ನು ಹಲವು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಯೋಜನೆ ರೂಪಿಸಬೇಕು ತಿಳಿ ಹೇಳಿದರು..

ಮನರೇಗಾ ಯೋಜನೆಯಡಿ ಪ್ರಸಕ್ತ 2023ರ ಏಪ್ರೀಲ್ 01 ರಿಂದ ಒಂದು ದಿನಕ್ಕೆ ರೂ. 316 ಕೂಲಿದರವನ್ನು ನಿಗದಿಪಡಿಸಲಾಗಿದ್ದು, ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣವನ್ನು ಇ-ಎಫ್‍ಎಂಎಸ್ ಮುಖಾಂತರ ನೇರವಾಗಿ ಕೂಲಿಕಾರರ ವೈಯಕ್ತಿಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಹಾಗೂ ಮಹಿಳೆ ಮತ್ತು ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಸದರಿ ಪ್ರಯೋಜನವನ್ನು ಉದ್ಯೋಗ ಚೀಟಿ ಹೊಂದಿರುವ ಗ್ರಾಮೀಣ ಕುಟುಂಬಗಳು ಪಡೆದುಕೊಳ್ಳುವುದು, ಹಾಗೂ ಜಿಲ್ಲೆಯ ಎಲಾ ್ಲಗ್ರಾಮ ಪಂಚಾಯತಿಗಳಲ್ಲಿ ಬೆಸಿಗೆ ಕಾಲ ಸಮಿಪಿಸುತ್ತಿರುವ ಹಿನ್ನಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ಎಲಾ ್ಲಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳಿಗೆ ಹೇಳಿದರು..

ಈ ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ಪಂ.ರಾ. ಸಹಾಯಕ ನಿರ್ದೇಶಕರು, ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಪಿಡಿಒಗಳು, ನರೇಗಾ ಸಿಬ್ಬಂದಿಗಳು, ಡಿಇಒಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net