ಜಿಪಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ

IMG-20240711-WA0004.jpg
Published on

ಬೆಳಗಾವಿ: ಆದಾಯಕ್ಕಿಂದ ಹೆಚ್ಚಿನ ಆಸ್ತಿಗಳಿಗೆ ಮಾಡಿರುವ ಆರೋಪದ ಮೇರೆಗೆ ಬೆಳಗಾವಿ ಜಿಪಂ ಎಇಇ ಮಹಾದೇವ ಬನ್ನೂರ ಮನೆಯ ಮೇಲೆ ಗುರುವಾರ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ತಾಲೂಕಿನ ಯಳ್ಳೂರ ಹೊರವಲಯದಲ್ಲಿರು ಬನ್ನೂರ ಮನೆಯ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯ ಕೋಣೆ ಕೋಣೆಯಲ್ಲಿ ತಪಾಸಣೆ ನಡೆಸಿದ್ದಾರೆ.

ಈ ಹಿಂದೆಯೂ ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದ ಲೋಕಾ ಅಧಿಕಾರಿಗಳು ಆಗ ದಾಳಿಯಲ್ಲಿ ಮಹತ್ವದ ದಾಖಲೆ ಸಂಗ್ರಹ ಮಾಡಿಕೊಂಡು ತೆರಳಿದ್ದರು. ಅದರ ಮುಂದುವರೆದ ಭಾಗವಾಗಿ ಮತ್ತೊಮ್ಮೆ ದಾಳಿ ಮಾಡಿದ್ದಾರೆ‌.

ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡದಿಂದ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದ್ದಾರೆ‌.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net