ಬಿಜೆಪಿಯಿಂದ ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅಮಾನತು

SUJATHA
Published on

ಚಿಕ್ಕಮಗಳೂರು: ಪಕ್ಷವಿರೋಧಿ ಚಟುವಟಿಕೆ ಆರೋಪದ ಮೇಲೆ ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಿ ಪಕ್ಷದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಸುಜಾತ ಕೃಷ್ಣಪ್ಪ ಅವರು ಕಳೆದ ಕೆಲವು ತಿಂಗಳಿನಿಂದ ಪದೇ ಪದೇ ಉಲ್ಲಂಘಿಸಿದ್ದಲ್ಲದೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಪಕ್ಷದ ಘನತೆಗೆ ಕುಂದುಂಟುಮಾಡಿ ಮುಜುಗರಕ್ಕೆ ಕಾರಣರಾಗಿದ್ದಾರೆ. ಹಲವು ಬಾರಿ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ತಿಳಿಸಿದರೂ ಇದುವರೆಗೂ ಸಮಜಾಯಿಷಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅವರನ್ನು ಅಮಾನತುಗೊಳಿಸಿರುವುದಾಗಿ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net