ಹೊನ್ನಾವರ ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಭೇಟಿ

ZP Ceo Visit
Published on

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಬುಧವಾರ ಭೇಟಿ ನೀಡಿ, ಕುಡಿಯುವ ನೀರಿನ ಯೋಜನೆಯಾದ ಜಲ ಜಿವನ್ ಮಿಷನ್ ಯೋಜನೆಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ FTK -ನೀರಿನ ಗುಣಮಟ್ಟ, VWSC & O&M policy adoption ಕುರಿತು ವರದಿಗಳನ್ನು ಪರಿಶೀಲಿಸಿದರು.

ಭಟ್ಕಳ ತಾಲೂಕಿನ ಶಿರಾಲಿ ಎಮ್ ವಿ ಎಸ್ ಕಾಮಗಾರಿಯ ಜಾಕವೇಲ್ ಸ್ಥಳ ಪರಿವಿಕ್ಷಣೆ ಮಾಡಿ ಬಾಕಿ ಇರುವ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮವಹಿಸಲು ಸೂಚಿಸಿದರು. ಬಳಿಕ ಮಾತನಾಡಿದ ಅವರು ಈ ಯೋಜನೆಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಮತ್ತು ಇತ್ತಿಚ್ಚಿಗೆ ಮಳೆ ಅತಿ ಹೆಚ್ಚು ಆಗುತ್ತಿರುವುದರಿಂದ ನೀರಿನ ಮೂಲಗಳನ್ನು ಸ್ವಚ್ಚವಾಗಿ ಮತ್ತು ಕಲುಸಿತವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮತ್ತು ಸಾರ್ವಜನಿಕರಿಗೆ ಮಳೆಗಾಲದಲ್ಲಿ ಕುಡಿಯುವ ನೀರಿನ ಬಗೆಗೆ ಎಚ್ಚರಿಕೆ ವಹಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಹೊನ್ನಾವರ ಮತ್ತು ಭಟ್ಕಳ ತಾಲೂಕು ಪಂಚಾಯತಿ ಕಾರ್ಯನಿರ್ವಹಕ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ ಅಭಿಯಂತರರು, ತಾ ಪಂ ವ್ಯವಸ್ಥಾಪಕರು, ಆರ್ ಡಬ್ಲ್ಯೂ ಎಸ್ ವಿಭಾಗ ಕಚೇರಿಯ ಸಹಾಯಕ ಇಂಜಿನಿಯರ್‌ಗಳು, ಜೆಜೆಎಮ್ ಡಿಪಿಎಂ, ವಿವಿಧ ಗ್ರಾ.ಪಂ ನ ಗ್ರಾಮ ಪಂಚಾಯತಿ ಪಿಡಿಓ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಗುತ್ತಿಗೆದಾರರು, ನೀರುಗಂಟಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net