ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ : ಜಿಪಂ ಸಿಇಒ ರಾಹುಲ್ ಶಿಂಧೆ ಬೇಟಿ

IMG-20241122-WA0009.jpg
Published on

ಬೆಳಗಾವಿ : ಸಮಾಜ ಕಲ್ಯಾಣ ಇಲಾಖೆಯ ಮೋರಾರ್ಜಿ ದೇಸಾಯಿ ವಸತಿ ಕಾಲೇಜಿನ ಪಿಯುಸಿ ವಿಜ್ಞಾನ ಪ್ರಥಮ ವರ್ಷದ ಎಸ್ ಸಿ/ ಎಸ್ ಟಿ ವಿದ್ಯಾರ್ಥಿಗಳಿಗೆ ಐಐಟಿ ಆಯ್ಕೆ ಸಲುವಾಗಿ ವಿಶೇಷ ತರಬೇತಿ ಹಮ್ಮಿಕೊಳ್ಳಲು ಸೂಕ್ತ ಕ್ಯಾಂಪಸ್ ಆಯ್ಕೆ ಮಾಡಲು ಬೆಳಗಾವಿ ತಾಲೂಕಿನ ಮಂಡೋಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಜಿಪಂ ಸಿಇಒ ರಾಹುಲ್ ಶಿಂಧೆ ರವರು ಮಂಡೋಳ್ಳಿ ವಸತಿ ಶಾಲೆಯ ಮೂಲಭೂತ ಸೌಲಭ್ಯಗಳ ಬಗ್ಗೆ ಹಾಗೂ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ಮಾಡಿ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡುವದರ ಜೊತೆಗೆ ಈ ಸಲ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಗುಣಾತ್ಮಕವಾಗಿ ಹೆಚ್ಚಿಸಿ ಶೇ. 100% ರಷ್ಟು ಸಾಧನೆ ಮಾಡಲು ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕರಾದ ರಾಮಗೌಡ ಕನ್ನೋಳ್ಳಿ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ್ ಕುರಿಹುಲಿ ಹಾಗೂ ಪ್ರಾಂಶುಪಾಲರಾದ ಅನಂತ ಕುಲಕರ್ಣಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net