

ಬೆಳಗಾವಿ : ಏಪ್ರೀಲ್ 1 ರಿಂದ ಹೊಸ ಆರ್ಥಿಕ ವರ್ಷವು ಪ್ರಾರಂಭವಾಗಿದ್ದು, ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಯೋಜಯಡಿ ಕೂಲಿ ಪಡೆದುಕೊಂಡು ನರೇಗಾ ಯೋಜನೆಯ ಉಪಯೋಗಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ರವಿ ಎನ್ ಬಂಗಾರೆಪ್ಪನವರ ಹೇಳಿದರು.ಬಸ್ತವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ನಾಲಾ ಹೂಳ ಎತ್ತುವ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿ-ಕಾರ್ಮಿಕರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ನೀಡಿ ಅವರು ಮಾತನಾಡಿದರು.