

ಬೆಳಗಾವಿ: ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಅವರ ಜನ್ಮ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ರವರು ಪೂಜೆ ಸಲ್ಲಿಸುವ ಮೂಲಕ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿದರು.
ಜಿ.ಪಂ. ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನ್ನವರ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಅಕ್ಷರದಾಸೋಹ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಸಹಾಯಕ ಕಾರ್ಯದರ್ಶಿ(ಆಡಳಿತ) ರಾಹುಲ್ ಕಾಂಬಳೆ, ಸಹಾಯಕ ನಿರ್ದೇಶಕಿ(ಆಡಳಿತ) ಜಯಶ್ರೀ ನಂದೇನ್ನವರ, ಶಾಖಾ ವ್ಯವಸ್ಥಾಪಕರು ಹಾಗೂ ಜಿಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.