ಅ.10ಕ್ಕೆ ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ

salumarada timmakka
Published on

ಮೈಸೂರು: ಪರಿಸರ ಹಾಗೂ ಅದರ ಸಂರಕ್ಷಣೆ ಕುರಿತು ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ ಅ.10ರಂದು ಬೆಳಗ್ಗೆ 10ಕ್ಕೆ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಶೈಕ್ಷಣಿಕ ವಿಭಾಗದ ವಿಚಾರಸಂಕಿರಣ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಎನ್‌ಎಸ್‌ಎಸ್ ಸ್ವಯಂಸೇವಕರು ಪರಿಸರ ಹಾಗೂ ಅದರ ಸಂರಕ್ಷಣೆ ಕುರಿತು ಪಾಲ್ಗೊಳ್ಳಲಿದ್ದಾರೆ. ನಂತರ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಸಾಲುಮರದ ತಿಮ್ಮಕ್ಕ ಅವರಿಂದ ಗಿಡ ನೆಡುವ ಕಾರ್ಯಕ್ರಮ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net