ಅ.24ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

CTD M.VIJAY
Published on

ಚಿತ್ರದುರ್ಗ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ,ಪೊಲೀಸ್‌ಇಲಾಖೆ,ಜಿಲ್ಲಾ ಸಶಸ್ತ್ರ ಮೀಸಲು ಪಡೆ,ಆರೋಗ್ಯ ಇ ಲಾಖೆ ಆಶ್ರಯದಲ್ಲಿ ಅ.24ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾ ಚರಣೆ ಮತ್ತು ಮಾನಸಿಕ ಯೋಗಕ್ಷೇಮ ಜಾಗೃತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಪ್ರಾಧಿಕಾರದ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಕಾರ‌್ಯಕ್ರಮ ಉದ್ಘಾಟಿಸುವರು. ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಅಧ್ಯಕ್ಷತೆ ವಹಿಸುವರು. ಹಿರಿಯ ಅಧಿಕಾರಿಗಳು,ವಕೀಲರ ಸಂಘ ದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮತ್ತಿ ತರ ಪದಾಧಿಕಾರಿಗಳು ಉಪಸ್ಥಿತರಿರುವರು. ಉಪ ಪ್ರಧಾನ ಕಾನೂನು ಅಭಿರಕ್ಷಕ ಎಂ.ಮೂರ್ತಿ,ಜಿಲ್ಲಾ ಸ್ಪತ್ರೆ ಮನೋವೈದ್ಯ ಡಾ.ಆರ್.ಮಂಜು ನಾಥ್ ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net