ಅ. 26 ರಂದು ರಾಜ್ಯಮಟ್ಟದ ಕಾರ್ಮಿಕ ಸಮ್ಮೇಳನ

Published on

ಬಳ್ಳಾರಿ : ಮೈಸೂರಿನಲ್ಲಿ ಎಐಯುಟಿಯುಸಿ ಸಂಘಟನೆಯಿಂದ ಅ. 26 ರಂದು 4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಐಯುಟಿಯುಸಿ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಹೇಳಿದರು.
ನಗರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಕೈಗಾರಿಕಾ ಕಾರ್ಮಿಕರು, ವೈದ್ಯಕೀಯ ಕಾಲೇಜು, ಸರ್ಕಾರಿ ವಸತಿ ನಿಲಯ , ವಿಶ್ವವಿದ್ಯಾಲಯ ಹಾಗೂ ಇನ್ನಿತರೆ ಕ್ಷೇತ್ರಗಳ ಗುತ್ತಿಗೆ ಕಾರ್ಮಿಕರು ಸೇರಿದಂತೆ ಸಾವಿರಾರು ಕಾರ್ಮಿಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷ ಕೆ. ರಾಧಕೃಷ್ಣ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಶಂಕರ್‌ದಾಸ್ ಗುಪ್ತ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಸಮ್ಮೇಳನದಲ್ಲಿ ನೂರಾರು ಕಾರ್ಮಿಕ ಮುಖಂಡರು ಹಾಗೂ ಐದು ಸಾವಿರಕ್ಕೂ ಅಧಿಕ ಕಾರ್ಮಿಕರು ಭಾಗವಹಿಸುವವರು ಎಂದು ಮಾಹಿತಿ ನೀಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರಬಲ ಕಾರ್ಮಿಕ ಚಳುವಳಿಯನ್ನು ಬೆಳೆಸಲು ಈ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನವನ್ನು ಸಂಘಟಿಸಲಾಗುತ್ತದೆ ಎಂದರು. ಪ್ರಮುಖರಾದ ಡಾ.ಪ್ರಮೋದ್, ಎ.ಶಾಂತ, ಸುರೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net